ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೭-೧೨-೨೦೦೭ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತು ಸಾವಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಹೆಚ್ಚಿನ ವರದಕ್ಷಿಣೆಗಾಗಿ ಒತ್ತಾಯಿಸಿ ಬಂಗಾರಪೇಟೆ ತಾಲೂಕು ಕಳ್ಳಿಕುಪ್ಪ ಗ್ರಾಮದ ವಾಸಿ ಸಂಧ್ಯಾರಾಣಿ ಎಂಬುವರನ್ನು ಅವರ ಗಂಡ ರಾಮಚಂದ್ರ ಮಾವ ವೆಂಕಟೇಶಪ್ಪ ಮತ್ತು ಅತ್ತೆ ಗಂಗಮ್ಮ ರವರುಗಳು ಸೇರಿಕೊಂಡು ಕೊಲೆಮಾಡಿ ಬಂಗಾರಪೇಟೆ ತಾಲೂಕು ನಾಗಶೆಟ್ಟಿಹಳ್ಳಿ ಗ್ರಾಮದ ಬಳಿ ನಾಗರಾಜ್ ಎಂಬುವರ ನೀರು ಬಾವಿಗೆ ಹಾಕಿರುತ್ತಾರೆ. ಈಗ್ಗೆ ೪ ತಿಂಗಳ ಹಿಂದೆ ಬಂಗಾರಪೇಟೆ ತಾಲೂಕು ಕಳ್ಳಿಕುಪ್ಪ ವಾಸಿ ರಾಮಚಂದ್ರ ಎಂಬುವರೊಂದಿಗೆ ವಿವಾಹವಾಗಿದ್ದು ಹಣ ಮತ್ತು ಒಡವೆಗಳನ್ನು ವರದಕ್ಷಿಣೆ ರೂಪದಲ್ಲಿ ನೀಡಿರುತ್ತಾರೆ. ಮದುವೆಯ ನಂತರ ಆರೋಪಿಗಳು ಇನ್ನು ಹೆಚ್ಚಿನ ಹಣ ತರಲು ಪೀಡಿಸುತ್ತಿದ್ದು ಇದಕ್ಕೆ ಸಂಧ್ಯಾರಾಣಿ ರವರು ಒಪ್ಪದಿದ್ದಾಗ ಈ ಕೃತ್ಯ ಎಸಗಿರುತ್ತಾರೆ.
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ಉರಿಗಾಂ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೭-೧೨-೨೦೦೭ ರಂದು ೦೯೫೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಪಿಚ್ಚಹಳ್ಳಿ ಗ್ರಾಮದ ವಾಸಿ ಪೃಥ್ವಿರಾಜ್ ಎಂಬುವರು ತಮ್ಮ ಗ್ರಾಮದ ಬಸ್ ನಿಲ್ದಾಣದ ಬಳಿ ನಿಂತಿದ್ದರು. ಆ ಸಮಯದಲ್ಲಿ ಕೆ.ಜಿ.ಎಫ್. ಕಡೆಯಿಂದ ಬಂದ ಕೆ.ಎಸ್.ಆರ್.ಟಿ.ಸಿ ವಾಹನ ಸಂಖ್ಯೆ ಕೆಎ-೦೮-ಎಫ್-೮೧೯ ರ ಚಾಲಕ ಉದಯ್ ಕುಮಾರ್ ಎಂಬುವರು ತಮ್ಮ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾರೆ. ಇದರ ಪರಿಣಾಮ ಪೃಥ್ವಿರಾಜ್ ರವರಿಗೆ ಗಾಯಗಳುಂಟಾಗಿರುತ್ತದೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ದಿನಾಂಕ ೧೫-೧೨-೨೦೦೭ ರಂದು ೧೭೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಕೊಮ್ಮೇನಹಳ್ಳಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ಕೊಮ್ಮೇನಹಳ್ಳಿ ವಾಸಿ ಅಣ್ಣಯ್ಯ (೬೫) ಎಂಬುವರ ಮೇಲೆ ಅದೇ ಗ್ರಾಮದ ವೆಂಕಟಪ್ಪ ಎಂಬುವನು ಜಗಳ ತೆಗೆದು ದೊಣ್ಣೆ ಮತ್ತು ಚಾಕುವಿನಿಂದ ಹಲ್ಲೆ ಮಾಡಿ, ಪ್ರಾಣ ಬೆದರಿಕೆ ಹಾಕಿರುತ್ತಾನೆ. ಆರೋಪಿಯ ಹೆಂಡತಿ ಕೋಪ ಮಾಡಿಕೊಂಡು ತವರು ಮನೆಗೆ ಬಂದ ವಿಚಾರದಲ್ಲಿ ಈ ಕೃತ್ಯ ಸಂಭವಿಸಿರುತ್ತದೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


