ದಿನದ ಅಪರಾಧಗಳ ಪಕ್ಷಿನೋಟ ೨೩ ನೇ ಡಿಸೆಂಬರ್ ೦೭

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೩-೧೨-೨೦೦೭ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೧

  •   ಮಾರಿಕುಪ್ಪಂ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೧೨-೨೦೦೭ ರಂದು ೨೦೩೦ ಗಂಟೆ ಸಮಯದಲ್ಲಿ ಮೈಸೂರು ಮೈನ್ಸ್ ಕೆ.ಜಿ.ಎಫ್ ನ ಸೆಕ್ಯೂರಿಟಿ ಗಾರ್ಡರವರು ಕರ್ತವ್ಯ ನಿರ್ವಹಿಸುತ್ತಿದ್ದರು. ಆ ಸಮಯದಲ್ಲಿ ೨೦ ರಿಂದ ೨೫ ಜನ ಅಪರಿಚಿತ ಕಳ್ಳರು ಮೈಸೂರು ಮೈನ್ಸ್ ಪ್ಲಾಂಟೇಷನ್ ಒಳಗೆ ಅಕ್ರಮ ಪ್ರವೇಶ ಮಾಡಿ ಕಳವು ಮಾಡಲು ಪ್ರಯತ್ನಿಸಿದಾಗ ಸೆಕ್ಯೂರಿಟಿ ಗಾರ್ಡರವರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದಾಗ ಆರೋಪಿಗಳು ಪರಾರಿಯಾಗಿರುತ್ತಾರೆ ಇತ್ಯಾದಿ.

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕಣ : ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೧೨-೨೦೦೭ ರಂದು ೧೭೦೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಪುರ ಗ್ರಾಮದ ವಾಸಿ ಪಿ.ನಾಗಾರಜ್ (೪೨) ಮತ್ತು ಅವರ ಬಾವ ಆರ್.ನಾಗರಾಜ್ ರವರುಗಳು ಬಂಗಾರಪೇಟೆ – ಸೂಲಿಕುಂಟೆ ರಸ್ತೆಯ ಹೊಸೂರು ಗ್ರಾಮದ ಬಳಿ ಹಿರೋಹೊಂಡ ಪ್ಯಾಷನ್ ವಾಹನ ಸಂಖ್ಯೆ ಕೆ.ಎ-೦೮-ಜೆ-೨೯೮೯ ರಲ್ಲಿ ಬರುತ್ತಿದ್ದರು. ಆ ಸಮಯದಲ್ಲಿ ಎದುರುಗಡೆಯಿಂದ ಬಂದ ಲಾರಿ ಸಂಖ್ಯೆ ಕೆ.ಎ-೫೩-೪೯೫೦ ರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿರುತ್ತಾರೆ. ಇದರ ಪರಿಣಾಮ ಎಸ್.ನಾಗರಾಜ್ ಮತ್ತು ಅವರ ಬಾವ ಆರ್‍,ನಾಗರಾಜ್ ಎಂಬುವರುಗಳಿಗೆ ರಕ್ತಗಾಯಗಳಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೧೨-೨೦೦೭ ರಂದು ೧೧೧೫ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಕ್ಯಾಸಂಬಳ್ಳಿ ಗ್ರಾಮದ ವಾಸಿ ಬಾಸ್ಕರರೆಡ್ಡಿ ಎಂಬುವರು ತನ್ನ ಅಣ್ಣನ ಮನೆಯಲ್ಲಿ ಕುಳಿತಿದ್ದರು. ಆ ಸಮಯದಲ್ಲಿ ಅದೇ ಗ್ರಾಮದ ವಾಸಿಗಳಾದ ನಾಗರಾಜ್ ಗೌಡ, ನಾರಾಯಣಗೌಡ ಮತ್ತು ಮುನೇಗೌಡ ರವರುಗಳು ಉದ್ದೇಶಪೂರ್ವಕವಾಗಿ ಜಗಳತೆಗೆದು ದೊಣ್ಣೆ ಮತ್ತು ಕಲ್ಲುಗಳಿಂದ ಬಾಸ್ಕರರೆಡ್ಡಿ ಎಂಬುವರಿಗೆ ಹೊಡೆದು ಪ್ರಣ ಬೆದರಿಕೆ ಹಾಕಿರುತ್ತಾರೆ. ಜಮೀನಿನ ರಸ್ತೆ ಮತ್ತು ಹಣದ ವಿಚಾರವಾಗಿ ಕೃತ್ಯ ಎಸಗಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದು ಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply