ದಿನದ ಅಪರಾಧಗಳ ಪಕ್ಷಿನೋಟ ೨೪ ನೇ ಡಿಸೆಂಬರ್ ೦೭

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೧೨-೨೦೦೭ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕಣ : ಇಲ್ಲ

ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೧೨-೨೦೦೭ ರಂದು ೧೭೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್. ಉರಿಗಾಂ ವಾಸಿ ಸೋಮಪ್ಪ (೫೩) ಎಂಬುವರು ಐದು ದೀಪಗಳ ವೃತ್ತದ ಕಡೆಯಿಂದ ಉರಿಗಾಂ ಅಂಚೆ ಕಛೇರಿ ಹತ್ತಿರ ತನ್ನ ಸ್ನೇಹಿತರ ಜೊತೆ ರಸ್ತೆ ಎಡ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಅದೇ ಸಮಯದಲ್ಲಿ ಉರಿಗಾಂ ರೈಲು ನಿಲ್ದಾಣದ ಕಡೆಯಿಂದ ಉರಿಗಾಂ ವಾಸಿ ಮನೋಹರ್ ಎಂಬುವರು ಸೈಕಲ್ ನಲ್ಲಿ ಹೋಗುತ್ತಿದ್ದರು. ಸಮಯದಲ್ಲಿ ಅಂಬಾಸಿಡರ್ ಕಾರ್ ಸಂಖ್ಯೆ ಕೆ.-೦೩-ಎಂ-೪೭೬೦ ವಾಹನ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ಮನೋಹರ್ ಎಂಬುವರ ಸೈಕಲ್ ಗೆ ಡಿಕ್ಕಿ ಹೊಡೆದ ಪ್ರಯುಕ್ತ ಸೈಕಲ್ ಜಖಂಗೊಂಡು ಮನೋಹರ್ ಮತ್ತು ಪಾದಚಾರಿ ಸೋಮಪ್ಪ ಎಂಬುವರುಗಳಿಗೆ ರಕ್ತಗಾಯಗಳಾಗಿರುತ್ತದೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •   ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹೆಂಗಸು ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೧೨-೨೦೦೭ ರಂದು ೦೬೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಟಿ.ಗೊಲ್ಲಹಳ್ಳಿ ಗ್ರಾಮದ ವಾಸಿ ಶ್ರೀಮತಿ ರೇಣುಕಮ್ಮ (೨೭) ಕೋಂ ನಾಗರಾಜಪ್ಪ ಎಂಬುವರು ತನ್ನ ಗಂಡನೊಡನೆ ಬಾಯಿಮಾತಿನ ಜಗಳ ಮಾಡಿಕೊಂಡಿರುತ್ತಾರೆ. ಸಮಯದಲ್ಲಿ ಮನೆಯ ಕಸವನ್ನು ಹೊರಗೆ ಹಾಕಿ ಬರುತ್ತೇನೆಂದು ಹೋದವರು ಇದುವರೆವಿಗೂ ವಾಪಸ್ಸು ಬಾರದೆ ಕಾಣೆಯಾಗಿರುತ್ತಾರೆ. ಕಾಣೆಯಾದ ಹೆಂಗಸಿನ ಚಹರೆ ರೀತಿ ಇರುತ್ತದೆ. ಎತ್ತರ . ಅಡಿ, ಸಾದಾರಣ ಮೈಕಟ್ಟು, ಕೋಲು ಮುಖ, ಗೋದಿ ಮೈಬಣ್ಣ, ಕೆಂಪು ಬಣ್ಣದ ಜಾಕೀಟು, ಹಸಿರು ಬಣ್ಣದ ಹೂಗಳ ಸೀರೆ ಮತ್ತು ಬೂದು ಬಣ್ಣದ ಶ್ವೇಟರ್ ಧರಿಸಿರುತ್ತಾರೆ. ಕನ್ನಡ, ತಮೀಳು ಮತ್ತು ತೆಲಗು ಭಾಷೆ ಮಾತನಾಡುತ್ತಾರೆ.

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದು ಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply