ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೧೨-೨೦೦೭ ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ : ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೧೨-೨೦೦೭ ರಂದು ೨೧೦೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್. ಆಂಡ್ರಸನ್‌ಪೇಟೆ ವಾಸಿ ಶರತ್ (೧೭) ಎಂಬುವರು ಆಂಡ್ರಸನ್‌ಪೇಟೆ ೨ನೇ ಬ್ಲಾಕ್‌ನಲ್ಲಿ ಡ್ಯಾನ್ಸ್ ಕಾರ್ಯಕ್ರಮಕ್ಕೆ ಹೋಗಿದ್ದರು. ಆ ಸಮಯದಲ್ಲಿ ಮಾರಿಕುಪ್ಪಂ ಗಿಲ್ಬಟ್ಸ್ðಲೈನ್ ವಾಸಿ ಶಂಕರ್ ಮತ್ತು ಇನ್ನಿಬ್ಬರು ಶರತ್‌ರವರನ್ನು ಬ್ಲೇಡಿನಿಂದ ಕಣ್ಣುಬ್ಬು ಮತ್ತು ತಲೆಯ ಮೇಲೆ ಹೊಡೆದು ರಕ್ತಘಾಯಪಡಿಸಿರುತ್ತಾರೆ. ಡ್ಯಾನ್ಸ್ ಕಾರ್ಯಕ್ರಮದಲ್ಲಿ ಗೇಲಿ ಮಾಡಿದ ವಿಚಾರವಾಗಿ ಈ ಕೃತ್ಯವೆಸಗಿರುತ್ತಾರೆ.
ಇತರೆ: ೦೧
-
ಬೆಮೆಲ್‌ನಗರ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿರುವ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೨-೧೨-೨೦೦೭ ರಂದು ಬಂಗಾರಪೇಟೆ ತಾಲೂಕು ದೊಡ್ಡೂರು ಕರಪನಹಳ್ಳಿ ಗ್ರಾಮದ ವಾಸಿ ಸೋಮನಾಥ (೨೭) ಎಂಬುವರನ್ನು ಅದೇ ಗ್ರಾಮದ ವಾಸಿ ವಿಜಯ್ಕುಮಾರ ಎಂಬುವರು ಡಿಶ್ ಕೇಬಲ್ ಹಾಕಲು ಅರಳೀಮರದ ಮೇಲೆ ಹತ್ತಿಸಿರುತ್ತಾರೆ. ಆ ಸಮಯದಲ್ಲಿ ಸೋಮನಾಥ ಎಂಬುವರು ಡಿಶ್ ಕೇಬಲ್ ಹಾಕುವಾಗ ಮರದ ಬಳಿ ಹಾದುಹೋಗಿದ್ದ ವಿದ್ಯುತ್ ತಂತಿಗೆ ಡಿಶ್ ಕೇಬಲ್ ತಗುಲಿ ವಿದ್ಯುತ್ ಶಾಕ್ ಹೊಡೆದಿದ್ದರಿಂದ ಮರದ ಮೇಲಿನಿಂದ ಕೆಳಕ್ಕೆ ಬಿದ್ದಿದ್ದು ತಲೆ ಮತ್ತು ಮೈಮೇಲೆ ಘಾಯಗಳಾಗಿದ್ದು, ಈತನನ್ನು ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆಯಿಂದ ಗುಣಮುಖನಾಗದೆ ದಿನಾಂಕ ೦೩-೧೨-೨೦೦೭ ರಂದು ೧೨೪೫ ಗಂಟೆಗೆ ಮೃತಪಟ್ಟಿರುತ್ತಾನೆ. ವಿಜಯ್ಕುಮಾರ ಎಂಬುವರು ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಬೇಜವಾಬ್ದಾರಿಯಿಂದ ಸೋಮನಾಥ ಎಂಬುವರನ್ನು ಅರಳಿಮರ ಹತ್ತಿಸಿದ್ದರಿಂದ ಈ ಕೃತ್ಯ ಸಂಭವಿಸಿರುತ್ತದೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


