ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೦೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ : ಇಲ್ಲ
ರಸ್ತೆ ಅಪಘಾತಗಳು: ೦೨
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೨
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೫-೦೧-೨೦೦೮ ರಂದು ೧೩೧೫ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಮಲ್ಲಂಗುರ್ಕಿ ಗ್ರಾಮದ ವಾಸಿ ಮುನಿವೆಂಕಟಪ್ಪ ಎಂಬುವರು ಟಿ.ವಿ.ಎಸ್. ಎಕ್ಸೆಲ್ ನಂ. ಕೆಎ-೪೦-ಇ-೭೧೧೧ ರಲ್ಲಿ ಬಂಗಾರಪೇಟೆ ತಾಲೂಕು ದೇಶಿಹಳ್ಳಿ ಗ್ರಾಮದ ರಾಮಕೃಷ್ಣಪ್ಪ ಎಂಬುವರ ತೋಟದ ಬಳಿ ಬರುತ್ತಿದ್ದರು. ಆ ಸಮಯದಲ್ಲಿ ಲಗ್ಗೇಜ್ ಆಟೋ ನಂ. ಟಿಎನ್-೨೪-೫೨೧೨ರ ಚಾಲಕ ಆಟೋವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಟಿ.ವಿ.ಎಸ್.ಎಕ್ಸೆಲ್‌ಗೆ ಡಿಕ್ಕಿಪಡಿಸಿದ ಪ್ರಯುಕ್ತ ಮುನಿವೆಂಕಟಪ್ಪ ಎಂಬುವರಿಗೆ ರಕ್ತಗಾಯಗಳಾಗಿರುತ್ತದೆ.
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಸ್ವರೂಪದ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೧-೨೦೦೮ ರಂದು ೦೯೩೫ ಗಂಟೆ ಸಮಯದಲ್ಲಿ ಕೋಲಾರ ಜಯನಗರದ ವಾಸಿ ಶ್ರೀನಿವಾಸಯ್ಯಶೆಟ್ಟಿ ಎಂಬುವರು ಬಂಗಾರಪೇಟೆಯ ಜೆ.ಎಂ.ಎಫ್.ಸಿ.ನ್ಯಾಯಾಲಯದ ಮುಂದೆ ಅಲ್ಟೋ ಕಾರ್ ನಂ. ಕೆಎ-೦೭-ಎಂ-೧೯೮೨ರಲ್ಲಿ ಬರುತ್ತಿದ್ದರು. ಆ ಸಮಯದಲ್ಲಿ ಕೋಲಾರ ಜಿಲ್ಲೆ ಎಂ.ಮಲ್ಲಾಂಡಹಳ್ಳಿ ಗ್ರಾಮದ ವಾಸಿ ಮಂಜುನಾಥ ಎಂಬುವರು ಲಾರಿ ಸಂಖ್ಯೆ ಕೆಎ-೦೨-ಬಿ-೭೯೨ ಅನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಕಾರಿನ ಹಿಂಬದಿಯಲ್ಲಿ ಡಿಕ್ಕಿ ಹೊಡೆದು ಕಾರ್ ಹಿಂಭಾಗ dRAUÉÆArgÀÄvÀÛzÉ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: E®è
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ೦೧
-
ಉರಿಗಾಂ ಪೊಲೀಸ್ ಠಾಣೆಯಲ್ಲಿ ಮುಂಜಾಗ್ರತೆ ಕ್ರಮಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೧-೨೦೦೮ ರಂದು ೦೩೩೦ ಗಂಟೆ ಸಮಯದಲ್ಲಿ ಉರಿಗಾಂ ಪೊಲೀಸ್ ಠಾಣೆಯ ಎ.ಎಸ್.ಐ. ಆದೆಪ್ಪ .ಕೆ.ಎ ಮತ್ತು ಪಿ.ಸಿ. ಮಂಜುನಾಥ ಎಂಬುವರುಗಳು ಕೆ.ಜಿ.ಎಫ್.ನ ಸ್ಕೂಲ್ ಆಫ್ ಮೈನ್ಸ್ ಮೈನ್ ಗೇಟ್ ಬಳಿ ಬಂದಿರುತ್ತಾರೆ. ಆ ಸಮಯದಲ್ಲಿ ಕೆ.ಜಿ.ಎಫ್.ನ ಬಿ.ಜಿಎಂ.ಎಲ್.ಓಲ್ಡ್ ಡಿಸ್ಪೆನ್ಸೆರಿ ಕ್ವಾರ್ಟರಸ್ ವಾಸಿ ಪರಿರಾಜ್ @ ಕುಟ್ಟಿ ಎಂಬುವರು ಪೊಲೀಸರನ್ನು ಕಂಡು ಓಡಲು ಪ್ರಯತ್ನಿಸಿದರು. ಆಗ ಪೊಲೀಸರು ಹಿಡಿದು ಅವೇಳೆಯಲ್ಲಿ ಆ ಸ್ಥಳದಲ್ಲಿ ಇರಲು ಕಾರಣ ಕೇಳಿದಾಗ ಸರಿಯಾದ ಉತ್ತರ ನೀಡಿರುವುದಿಲ್ಲ. ಪರಿರಾಜ್ ರವರನ್ನು ಪೊಲೀಸ್ ಠಾಣೆಗೆ ಕರೆತಂದು ಕಳವು ಮಾಡುವ ಉದ್ದೇಶದಿಂದ ಹೊಂಚುಹಾಕುತ್ತಿರುವೆನೆಂತ ಗುಮಾನಿ ಬಂದು ಕೇಸು ದಾಖಲು ಮಾಡಿರುತ್ತದೆ.
ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


