ದಿನದ ಅಪರಾಧಗಳ ಪಕ್ಷಿನೋಟ ೨೭ ನೇ ಜನವರಿ ೨೦೦೮

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೦೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ : ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮೇಲಿನ ದೌರ್ಲನ್ಯಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣವು ಕೆ.ಜಿ.ಎಫ್ ರಾಬಟ್ðಸನ್ ಪೇಟೆ ವಾಸಿ ಅಮಾನುಲ್ಲಾಖಾನ್ ಎಂಬುವರು ನೀಡಿದ ಆಧಾರದ ಮೇರೆಗೆ ದಾಖಲಾಗಿರುತ್ತದೆ. ಅಮಾನುಲ್ಲಾಖಾನ್ ರವರು ತನ್ನ ಮಗಳಾದ ಅಜುಂಖಾನ್ ಎಂಬುವರಿಗೆ  ಅಮ್ಜದ್‌ಖಾನ್‌ ಎಂಬುವರೊಂದಿಗೆ  ವಿವಾಹ ಮಾಸಡಿರುತ್ತಾರೆ. ವಿವಾಹದ ಸಮಯದಲ್ಲಿ ನಿಡಿದ್ದ  ವರದಕ್ಷಿಣೆ ಸಾಲದೆಂದು ಇನ್ನೂ ಹೆಚ್ಚಿನ ವರದಕ್ಷಿಣೆಯನ್ನು ತವರು ಮನೆಯಿಂದ ತರುವಂತೆ ದಿನಾಂಕ ೨೬-೧೨-೨೦೦೮ ರಂದು ೧೯೦೦ ಗಂಟೆ ಸಮಯದಲ್ಲಿ ಗಂಡ ಅಮ್ಜದ್‌ಖಾನ್, ರಶೀದ್‌ಬೇಗಂ ಅತ್ತೆ, ನೂರುಲ್ಲಾ ಖಾನ್ ಮಾ ಮತ್ತು ಅಯೇಷ ನಾದಿನಿ ರವರುಗಳು ಸೇರಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿರುತ್ತಾರೆ, ಅಜುಂಖಾನ್ ರವರು ಇವರ ಕಿರುಕುಳ ತಾಳಲಾರದೆ ನೇಣು ಹಾಕಿಕೊಂಡು ಸತ್ತಿರಬಹುದು ಅಥವಾ ಕೊಲೆ ಮಾಡಿರಬಹುದು ಎಂಬುದಾಗಿ  ಅಮಾನುಲ್ಲಾಖಾನ್ ರವರು ತಮ್ಮ ದೂರಿನಲ್ಲಿ ತಿಳಿಸಿರುತ್ತಾರೆ.

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು:è

ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹುಡುಗ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೦೧-೨೦೦೮ ರಂದು ೦೮೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ನಗರದ ೨ನೇ ಎಂ.ಜಿ. ಮಾರ್ಕೆಟ್, ರಾಬರ್ಟ್‌‌ಸನ್‌ಪೇಟೆ ಶ್ರೀ. ಆನಂದ(೧೫) ಬಿನ್ ಗಣಪತಿ ಎಂಬುವರು ಎಂದಿನಂತೆ ಶಾಲೆಗೆ ಹೋಗಲು ಮನೆಯಿಂದ ಹೋಗಿ ಶಾಲೆಗೂ ಹೋಗದೆ ಸಂಜೆ ಮನಗೆ ವಾಪಸ್ಸು ಬಾರದೆ ಕಾಣೆಯಾಗಿರುತ್ತಾರೆ. ಕಾಣೆಯಾದ ಹುಡುಗನ ಚಹರೆ ರೀತಿ ಇರುತ್ತದೆ. ಎತ್ತರ ಅಡಿ, ಸಾದಾರಣ ಮೈಕಟ್ಟು, ಕೋಲು ಮುಖ, ಕಪ್ಪು ಮೈಬಣ್ಣ, ಬಿಸ್ಕೆಟ್ ಬಣ್ಣದ ಷರ್ಟ್, ಕಾಫಿ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಕನ್ನಡ, ತೆಲಗು ತಮಿಳು ಮತ್ತು ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ.

ಮುಂಜಾಗ್ರತೆ ಕ್ರಮಗಳು: E®è

ಮೋಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದು ಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply