ದಿನದ ಅಪರಾಧಗಳ ಪಕ್ಷಿನೋಟ ೨೮ ನೇ ಜನವರಿ ೨೦೦೮

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೮-೦೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೧-೨೦೦೮ ರಂದು ೧೯೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳಾದ ಶ್ರೀ. ಅಪ್ಪೋಜಿ ಸಿಪಿಸಿ ೧೭೧ ಮತ್ತು ಶ್ರೀ ಶಿವಶಂಕರ್ರೆಡ್ಡಿ ಸಿಪಿಸಿ ೫೬ ರವರುಗಳು ಕಾರಹಳ್ಳಿ ಬಳಿ ಗಸ್ತಿನಲ್ಲಿರುವಾಗ ಮುಳಬಾಗಲು ತಾಲೂಕು ತಾಯಲೂರು ಗ್ರಾಮದ ವಾಸಿ ಪ್ಯಾರು @ ಪ್ಯಾರೇಜಾನ್ (೨೬) ಎಂಬುವರು ಅನುಮಾನಸ್ಪದವಾಗಿ ಬಜಾಜ್ ಕ್ಯಾಲಿಬಾರ್ ಸಂಖ್ಯೆ ಕೆಎ-೦೩-ಇಸಿ-೯೪೪೩ ವಾಹನವನ್ನು ಮಾರಾಟ ಮಾಟಲು ಪ್ರಯತ್ನಿಸುತ್ತಿದ್ದವರನ್ನು ಬಂದಿಸಿರುತ್ತಾರೆ.

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ : ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ: ಇಲ್ಲ

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ತಾಲೂಕು ಒಂಬತ್ತುಗುಳಿ ಗ್ರಾಮದ ಬಳಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೭-೦೧-೨೦೦೮ ರಂದು ೧೬೦೦ ಗಂಟೆ ಸಮಯದಲ್ಲಿ ಕಾರಮಂಗಲ ಗ್ರಾಮದ ವಾಸಿ ಶ್ರೀ ಚಂದ್ರಪ್ಪ (೩೫) ಮತ್ತು ಐನೋರಹೊಸಹಳ್ಳಿ ಗ್ರಾಮದ ವಾಸಿ ಶ್ರೀ ವಿಷ್ಣು (೨೨) ಎಂಬುವರುಗಳು ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿ ಒಂಬತ್ತುಗುಳಿ ಗ್ರಾಮದ ಬಳಿ ಪ್ರಯಾಣ ಮಾಡುತ್ತಿದ್ದಾಗ ವಿಷ್ಣು ಎಂಬುವರು ವಿನಾ ಕಾರಣ ಚಂದ್ರಪ್ಪರವರೊಂದಿಗೆ ಜಗಳ ಮಾಡಿ ಕೈಗಳಿಂದ ಮತ್ತು ಬೆಲ್ಟಿನಿಂದ ತಲೆಯ ಮೇಲೆ ಹೊಡೆದು ರಕ್ತ ಗಾಯಪಡಿಸಿರುತ್ತಾರೆ.

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದು ಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply