ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೧-೦೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ : ಇಲ್ಲ
ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೧.೦೧.೨೦೦೮ ರಂದು ೧೨೨೦ ಗಂಟೆ ಸಮಯದಲ್ಲಿ ಮಾಲೂರು ತಾಲೂಕು ಟೇಕಲ್ ಹೋಬಳಿ ನಿದ್ರಸಂದ್ರ ಗ್ರಾಮದ ವಾಸಿ ಶ್ರೀ. ಶ್ರೀನಿವಾಸ (೬೦) ಎಂಬುವರು ತನ್ನ ಪತ್ನಿ ನಾರಾಯಣಮ್ಮ ರವರೊಂದಿಗೆ ಮಗಳ ಮೊದುವೆಗಾಗಿ ಬಟ್ಟೆಗಳನ್ನು ತರಲು ಬಂಗಾರಪೇಟೆಗೆ ತಮ್ಮ ಟಿ.ವಿ.ಎಸ್. ವಾಹನ ಸಂಖ್ಯೆ ಕೆ.ಎ-೦೪-ಇಸಿ-೪೨೦೩ ರಲ್ಲಿ ಕೋಲಾರ-ಬಂಗಾರಪೇಟೆ ಮುಖ್ಯ ರಸ್ತೆಯ ಸಂಜಯಗಾಂಧಿ ನಗರದ ಬಳಿ ಬರುತ್ತಿರುವಾಗ ಎದರುಗಡೆಯಿಂದ ಒಂದು ಕಾರು ಸಂಖ್ಯೆ ಕೆಎ-೦೩-ಎಂಇ-೩೩೭೭ರ ಚಾಲಕ ವಾಹವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಶ್ರೀನಿವಾಸ್ ರವರ ಟಿ.ವಿ.ಎಸ್ ಗೆ ಡಿಕ್ಕಿ ಹೊಡೆದು ವಾಹನವನ್ನು ನಿಲ್ಲಿಸದೇ ಹೊರಟು ಹೋಗಿರುತ್ತಾನೆ. ಅಪಘಾತದ ದೆಸೆಯಿಂದ ಶ್ರೀನಿವಾಸ್ ಮತ್ತು ನಾರಾಯಣಮ್ಮ ರವರುಗಳಿಗೆ ರಕ್ತಗಾಯಗಳಾಗಿರುತ್ತದೆ.
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


