ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೧-೦೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೆ.ಜಿ.ಎಫ್. ಗಿತಾ ರಸ್ತೆ, ೬ ನೇ ಅಡ್ಡ ರಸ್ತೆಯ ಮನೆ ಸಂಖ್ಯೆ ೧೫೧೯/೧ ರ ಬಳಿ ಈ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೧೯-೦೨-೨೦೦೮ ರಂದು ೧೭೦೦ ಗಂಟೆ ಸಮಯದಲ್ಲಿ ೬ ನೇ ಅಡ್ಡ ರಸ್ತೆಯ ಮನೆ ಸಂಖ್ಯೆ ೧೫೧೯/೧ ವಾಸಿ ಶ್ರೀ ಪ್ರಸನ್ನ ಸತ್ಯ ಎಂಬುವರು ತನ್ನ ಮನೆಯ ಮುಂದೆ ಬಜಾಜ್ ಡಿಸ್ಕವರಿ ದ್ವಿಚಕ್ರ ವಾಹನ ಸಂಖ್ಯೆ ಕೆಎ-೦೫-ಟಿಆರ್-೦೫೨೮ ಅನ್ನು ನಿಲ್ಲಿಸಿ ಒಳಗೆ ಹೋಗಿ ನಂತರ ೧೮೦೦ ಗಂಟೆ ಸಮಯದಲ್ಲಿ ಬಂದು ನೋಡಲಾಗಿ ಯಾರೋ ಅಪರಿಚಿತ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ.
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ : ಇಲ್ಲ
ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ೦೧
-
ಉರಿಗಾಂ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕೆ.ಜಿ.ಎಫ್. – ಬಂಗಾರಪೇಟೆ ಮುಖ್ಯ ರಸ್ತೆ ಉರಿಗಾಂ, ಬಾಟಗಂಗಮ್ಮ ದೇವಾಲಯದ ಬಳಿ ಈ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೨೧-೦೨-೨೦೦೮ ರಂದು ೧೨೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್. ಚಾಂಪಿಯನ್‌ರೀಫ್ಸ್ ಕಾಸ್ಟನ್ ಬ್ಲಾಕ್ ವಾಸಿ ಶ್ರೀ ಪ್ಯಾರಿಸ್ಟ್ ರ್ ವಿಜಯ್ (೨೦) ಎಂಬುವರು ತನ್ನ ಪಲ್ಸರ್ ವಾಹನ ಸಂಖ್ಯೆ ಕೆಎ-೦೮-ಜೆ-೬೫೮೦ ರಲ್ಲಿ ಬೆಮೆಲ್ ಕಡೆಯಿಂದ ಬರುತ್ತಿರುವಾಗ ಮಾರುತಿ -೮೦೦ ವ್ಯಾನಿನ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ವಾಹನವನ್ನು ಚಲಾಯಿಸಿಕೊಂಡು ಹೇನ್ರಿಸ್ ಬಾಟಗಂಗಮ್ಮ ದೇವಾಲಯದ ಬಳಿ ವಿಜಯ್ ರವರ ವಾಹನಕ್ಕೆ ಡಿಕ್ಕಿ ಹೊಡೆದ ಪ್ರಯುಕ್ತ ವಿಜಯ್ ರವರು ಅಪಘಾತದ ಪ್ರಯುಕ್ತ ಕೆಳಗೆ ಬಿದ್ದು ಮೃತ ಪಟ್ಟಿರುತ್ತಾರೆ.
- ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


