ದಿನದ ಅಪರಾಧ ಪಕ್ಷಿನೋಟ ೨೪ನೇ ಮಾರ್ಚ್ ೨೦೦೮

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೦೩-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ನಲ್ಲಿ ಕಳ್ಳತನ ಮಾಡಲು ಪ್ರಯತ್ನ ಮಾಡಿರುವ ಬಗ್ಗೆ ಅಪರಾಧ ಪ್ರಕರಣದ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ಪಟ್ಟಣದ ಕೆನರಾ ಬ್ಯಾಂಕ್ ನಲ್ಲಿ ಸಂಭವಿಸಿರುತ್ತದೆ. ದಿನಾಂಕ ೨೪-೦೩-೨೦೦೮ ರಂದು ೧೧೨೦ ಗಂಟೆ ಸಮಯದಲ್ಲಿ ಶ್ರೀ. ರಾಜ ಬಿನ್ ಆದಿಕಾಲ್(೩೬) ಮಮೋಡಿ ಹಳ್ಳಿ ಗ್ರಾಮ, ಕರೂರು ಜಿಲ್ಲೆ, ತಮಿಳು ನಾಡು ಎಂಬುವನ್ನು ಕೆನರಾ ಬ್ಯಾಂಕ್ ಕ್ಯಾಷ್ ಕೌಂಟರ್‍ನಲ್ಲಿ ನಗದನ್ನು ಕಳ್ಳತನ ಮಾಡಲು ಪ್ರಯತ್ನಿಸಿರುತ್ತಾನೆ.

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ : ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕ: ಇಲ್ಲ

ರಸ್ತೆ ಅಪಘಾತಗಳು: ೦೨

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೨

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾದಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣವು ದಾಖಲಾಗಿರುತ್ತದೆ. ಕೃತ್ಯವು ಬಂಗಾರಪೇಟೆ ಬಸ್ಸ್ ನಿಲ್ದಾಣದಲ್ಲಿ ಸಂಭವಿಸಿರುತ್ತದೆ. ದಿನಾಂಕ ೨೩-೦೩-೨೦೦೮ ರಂದು ೧೪೧೫ ಗಂಟೆ ಸಮಯದಲ್ಲಿ ಕೆ.ಎಸ್.ಅರ್.ಟಿ.ಸಿ. ಬಸ್ಸ್ ಸಂಖ್ಯೆ ಕೆಎ-೦೭-ಎಫ್-೧೦೧೫ರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಾಜಪ್ಪ(೩೬) ಬ್ಯಾಟರಾಯಹಳ್ಳಿ ಎಂಬುವರಿಗೆ ಡಿಕ್ಕಿ ಹೊಡೆದ ಪ್ರಯುಕ್ತ ರಕ್ತಗಾಯಗಳಾಗಿರುತ್ತದೆ.
  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾದಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣವು ದಾಖಲಾಗಿರುತ್ತದೆ. ಕೃತ್ಯವು ಹುದುಕುಳ ಗ್ರಾಮದ ಬಳಿ ರಸ್ತೆಯಲ್ಲಿ ಸಂಭವಿಸಿರುತ್ತದೆ. ದಿನಾಂಕ: ೨೪-೦೩-೨೦೦೮ ರಂದು ೦೭೦೦ ಗಂಟೆಯ ಸಮಯದಲ್ಲಿ ತಿಮ್ಮನಾಯಕನಹಳ್ಳಿ ವಾಸಿ ತಿಮ್ಮರಾಯಪ್ಪ ಬಿನ್ ವೆಂಕಟರಾಮ(೩೫) ರವರು ತನ್ನ ವಾಹನ ಸಂಖ್ಯೆ ಕೆಎ-೪೨--೨೬೨ ರನ್ನು ಬಂಗಾರಪೇಟೆ ಕಡೆಯಿಂದ ಕೋಲಾರ ಕಡೆಗೆ ಹೋಗುತ್ತಿದ್ದಾಗ ಕೋಲಾರ ಕಡೆಯಿಂದ ಮಂಜುನಾಥ ಬಿನ್ ರಾಮಪ್ಪ (೨೧) ಎಂಬುವನ್ನು ತನ್ನ ವಾಹನ ಪಲ್ಸ್ ರ್ಸಂಖ್ಯೆ ಟಿಎನ್-೨೪-ಜೆಡ್ಜ್-೭೪೩೨ನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡದ ಪ್ರಯುಕ್ತ ತಿಮ್ಮರಾಯಪ್ಪ ರವರಿಗೆ ಎಡಕಾಲು ಮುರಿದು, ರಕ್ತಗಾಯಗಳಾಗಿರುತ್ತವೆ.

ಮೋಸ / ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದು ಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ

ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply