ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೧-೦೩-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ : ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕಣ : ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ / ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಯತ್ನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಕೆ.ಜಿ.ಎಫ್. ರಾಬರ್ಟ್‌ಸನ್‌ಪೇಟೆಯ ನಾಚಪಲ್ಲಿಯಲ್ಲಿ ಈ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೩೦-೦೩-೨೦೦೮ ರಂದು ೨೦೦೦ ಗಂಟೆ ಸಮಯದಲ್ಲಿ ರಾಬರ್ಟ್‌ಸನ್‌ಪೇಟೆಯ ವಾಸಿ ಸತೀಶ್ ಎಂಬುವರನ್ನು ನಾಚಪಲ್ಲಿ ವಾಸಿಯಾದ ವೆಂಕಟೇಶ್ ಎಂಬುವರು ಉದ್ದೇಶ ಪೂರ್ವಕವಾಗಿ ಜಗಳ ಮಾಡಿ ಸತೀಶ್‌ನನ್ನು ಕೊಲೆ ಮಾಡುವ ಉದ್ದೇಶದಿಂದ ಚಾಕುವಿನಿಂದ ಬುಜದ ಮೇಲೆ ತಿವಿದು ಕೊಲೆ ಮಾಡಲು ಪ್ರಯತ್ನಿಸಿರುತ್ತಾನೆ.
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಕೋಳಿ ಪಂದ್ಯಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬೂದಿಕೋಟೆ ಹೋಬಳಿ ಪಚ್ಚಾರಲಹಳ್ಳಿ ಗ್ರಾಮದ ಬಳಿ ನಡೆದಿರುತ್ತದೆ. ದಿನಾಂಕ ೩೦-೦೩-೨೦೦೮ ರಂದು ೧೫೧೫ ಗಂಟೆ ಸಮಯದಲ್ಲಿ ಬೆಂಗಳೂರಿನ ಹೆಬ್ಬಾಳದ ವಾಸಿಗಳಾದ ಟಿ.ಮುನೇಗೌಡ, ನಾಗರಾಜ ಮತ್ತು ಶ್ರೀರಾಮ ಎಂಬುವರುಗಳು ಹಣವನ್ನು ಪಣವಾಗಿಟ್ಟು ಕೋಳಿ ಜೂಜಾಟ ಆಡುತ್ತಿದ್ದರವರನ್ನು ಪಿ.ಎಸ್ ಐ ಬಂಗಾರಪೇಟೆ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಯವರು ದಸ್ತಗಿರಿ ಮಾಡಿ ಕ್ರಮ ಜರುಗಿಸಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೊಟಾರು ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದು ಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದು ಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


