ದಿನದ ಅಪರಾಧಗಳ ಪಕ್ಷಿನೋಟ ೧೩ ನೇ ಮೇ ೨೦೦೮
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೩-೦೫-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕೆ.ಜಿ.ಎಫ್. ಆಂಡ್ರಸನ್‌ಪೇಟೆಯ ಹರಿಶ್ಚಂದ್ರ ದೇವಸ್ಥಾನ ರಸ್ತೆಯಲ್ಲಿ ಸಂಭವಿಸಿರುತ್ತದೆ. ಕೆ.ಜಿ.ಎಫ್. ಚಾಮರಾಜಪೇಟೆ ಮನೆ ಸಂಖ್ಯೆ ೨೩ ರ ವಾಸಿ ಶ್ರೀಮತಿ ಆಶಾ (೨೫) ಮತ್ತು ಇಳಯರಾಜ ಎಂಬುವರುಗಳು ಒಬ್ಬರನ್ನೊಬ್ಬರು ಪ್ರೀತಿಸಿ ಈಗ್ಗೆ ೮ ವರ್ಷಗಳ ಹಿಂದೆ ತಮ್ಮ ತಂದೆ ತಾಯಿ ಹಾಗೂ ಹಿರಿಯರ ಸಮ್ಮುಖದಲ್ಲಿ ಮದುವೆಯಾಗಿ ಆಂಡ್ರಸನ್‌ಪೇಟೆಯ ಹರಿಶ್ಚಂದ್ರ ದೇವಸ್ಥಾನ ರಸ್ತೆಯಲ್ಲಿ ವಾಸವಾಗಿದ್ದು ಈಗ್ಗೆ ೨ ವರ್ಷಗಳಿಂದ ಆಶಾ ರವರ ಗಂಡ ಇಳಯರಾಜ ಸಂಸಾರಕ್ಕೆ ಸರಿಯಾಗಿ ಸಾಮಾಗ್ರಿಗಳನ್ನು ತರದೆ ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದು, ಅದನ್ನು ತಾಳಲಾರದೆ ಆಶಾ ರವರು ಚಾಮರಾಜಪೇಟೆಯ ತನ್ನ ತಾಯಿಯ ಮನೆಗೆ ಹೋಗಿದ್ದು ದಿನಾಂಕ ೧೨-೦೫-೨೦೦೮ ರಂದು ೧೪೦೦ ಗಂಟೆಗೆ ಇಳಯರಾಜ ಆಶಾ ರವರ ತಾಯಿಯ ಮನೆಗೆ ಬಂದು ಗಲಾಟೆ ಮಾಡಿ ಹಿಂಸೆ ನೀಡಿರುತ್ತಾನೆ.
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲೂಕು, ಕ್ಯಾಸಂಬಳ್ಳಿ ಹೋಬಳಿ, ಬಾಣಗಿರಿಗೊಲ್ಲಹಳ್ಳಿ ಗ್ರಾಮದ ಬಳಿ ಸಂಭವಿಸಿರುತ್ತದೆ. ದಿನಾಂಕ ೧೨-೦೫-೨೦೦೮ ರಂದು ೧೪೦೦ ಗಂಟೆ ಸಮಯದಲ್ಲಿ ಬಾಣಗಿರಿಗೊಲ್ಲಹಳ್ಳಿ ಗ್ರಾಮದ ವಾಸಿ ಶ್ರೀ ರಾಮಲಿಂಗಂ (೩೦) ಬಿನ್ ಆರಮುಗಂ ಎಂಬುವರು ಬಾಣಗಿರಿಗೊಲ್ಲಹಳ್ಳಿ ಗ್ರಾಮದ ಹತ್ತಿರವಿರುವ ಅವರ ತೋಟದಿಂದ ಮನೆಗೆ ಹೋಗಲು ಅದೇ ಗ್ರಾಮದ ಸಂಪತ್‌ರಾವ್ ರವರ ತೆಂಗಿನ ತೋಪಿನ ಹತ್ತಿರ ಕಾಲು ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅದೇ ಗ್ರಾಮದ ವಾಸಿಗಳಾದ ಮಂಜುನಾಥರೆಡ್ಡಿ ಮತ್ತು ಆನಂದರೆಡ್ಡಿ ಇಬ್ಬರೂ ರಾಮಲಿಂಗಂ ರವರ ಎದುರಿಗೆ ಬಂದು ಮಂಜೂನಾಥ್ ರವರ ಜಮೀನಿನಲ್ಲಿ ಟ್ರಾಕ್ಟರ್ ಓಡಿಸಿ ಜಮೀನು ನಾಶ ಮಾಡುವ ವಿಷಯದಲ್ಲಿ ಜಗಳ ತೆಗೆದು ದೊಣ್ಣೆಯಿಂದ ರಾಮಲಿಂಗಂ ರವರ ತಲೆಯ ಮೇಲೆ ಹೊಡೆದು ರಕ್ತ ಗಾಯಪಡಿಸಿರುತ್ತಾರೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


