ದಿನದ ಅಪರಾಧಗಳ ಪಕ್ಷಿನೋಟ ೧೪ನೇ ಮೇ ೧೦೦೮.

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೪-೦೫-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ

ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

-ಸಾಧಾರಣ:  ಇಲ್ಲ

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕೆ.ಜಿ.ಎಫ್., ರಾಬರ್ಟ್‌‌ಸನ್‌ಪೇಟೆ, ಪ್ರಿಚಾರ್ಡ್ ರಸ್ತೆಯ ವಿಜಯಲಕ್ಷ್ಮಿ ಕಾಂಪೌಂಡ್ ನಲ್ಲಿ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೧೨-೦೫-೨೦೦೮ ರಂದು ೨೧೩೦ ಗಂಟೆ ಸಮಯದಲ್ಲಿ ವಿಜಯಲಕ್ಷ್ಮಿ ಕಾಂಪೌಂಡ್ ವಾಸಿ ಶ್ರೀಮತಿ ಸರಸ್ವತಮ್ಮ (೬೨) ಕೋಂ ರಾಮಕೃಷ್ಣಪ್ಪ ಎಂಬುವರ ಬಳಿ ತನ್ನ ಮಗನಾದ ಮಮಜುನಾಥ್ ಎಂಬುವನು ಹಣದ ವಿಚಾರವಾಗಿ ವಿನಾ ಕಾರಣ ಜಗಳ ಕಾದು ಕೆಟ್ಟ ಮಾತುಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿರುತ್ತಾನೆ.

ಇತರೆ: ೦೧

  • ರಾಬರ್ಟ್‌‌ಸನ್‌ಪೇಟೆ 

  • ಪೊಲೀಸ್ಠಾಣೆಯಲ್ಲಿ ಆರೋಪಿ ಪರಾರಿ ಪ್ರಕರಣಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಆಂಡ್ರಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ವರದಕ್ಷಿಣೆ ಕಿರುಕುಳ ಪ್ರಕಣದಲ್ಲಿ ಭಾಗಿಯಾಗಿರುವ ಶ್ರೀ. ಇಳಿಯರಾಜ ಬಿನ್ ದಾಸ(೩೩), ಹರಿಶ್ಚಂದ್ರ ದೇವಸ್ಥಾನ ಬೀದಿ, ಆಂಡ್ರಸನ್‌ಪೇಟೆ ರವರನ್ನು ದಿನಾಂಕ ೧೩-೦೫-೨೦೦೮ ರಂದು ೧೭೧೫ ಗಂಟೆ ಸಮಯದಲ್ಲಿ ಶ್ರೀ. ಬಾಲಕೃಷ್ಣ, ಪೊಲೀಸ್ ಪೇದೆ ರವರು ನ್ಯಾಯಾಲಯಕ್ಕೆ ಹಾಜರು ಪಡಿಸಲು ನ್ಯಾಯಾಲಯಕ್ಕೆ ಕರೆತಂದು ಶೌಚಾಲಯದ ಬಳಿ ಬಿಟ್ಟಾಗ ಇಳಿಯರಾಜ ಪೇದೆಯ ಕಣ್ಣು ತಪ್ಪಿಸಿ ಕಾಂಪೌಂಡ್ ಜಿಗಿದು ತಪ್ಪಿಸಿಕೊಂಡು ಓಡಿಹೋಗಿದ್ದು, ಬಗ್ಗೆ ರಾಬರ್ಟ್‌‌ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮಕೈಗೊಂಡಿರುತ್ತದೆ. 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ತಿಳಿದುಬಂದಿಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply