ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೧-೦೫-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ಟೌನ್ ಬಸ್ ನಿಲ್ದಾಣದಲ್ಲಿ ಈ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೩೧-೦೫-೨೦೦೮ ರಂದು ೦೭೪೫ ಗಂಟೆ ಸಮಯದಲ್ಲಿ ಬೆಂಗಳೂರಿನ ರಾಜ ರಾಜೇಶ್ವರಿ ನಗರ, ಮನೆ ಸಂಖ್ಯೆ ೬೮೦ ರ ವಾಸಿ ಶ್ರೀ ಟಿ.ಸಿ.ಪ್ರಭಾಕ್, ಬೆಮೆಲ್ ಕಾರ್ಖಾನೆಯ ನೌಕರ ರವರು ರೈಲ್ವೆ ನಿಲ್ದಾಣದಿಂದ ಬಸ್ಸು ನಿಲ್ದಾಣಕ್ಕೆ ಬಂದು ಬೆಮೆಲ್ ಕಾರ್ಖಾನೆಗೆ ಹೋಗಲು ಬಸ್ಸಿಗಾಗಿ ಕಾಯುತ್ತಿರುವಾಗ ಮಿನಿ ಬಸ್ ಸಂಖ್ಯೆ ಕೆಎ-೨೦-ಎ-೨೨೪ ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಪ್ರಭಾಕರ್ ರವರಿಗೆ ಡಿಕ್ಕಿ ಹೊಡೆದು, ಇದರ ಪ್ರಯುಕ್ತ ರಕ್ತಗಾಯವಾಗಿರುತ್ತದೆ.
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಯತ್ನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ತಾಲೂಕು ಪೂಗಾನಹಳ್ಳಿ ಗ್ರಾಮದಲ್ಲಿ ಈ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೩೦-೦೫-೨೦೦೮ ರಂದು ೨೧೩೦ ಗಂಟೆ ಸಮಯದಲ್ಲಿ ಪೂಗಾನಹಳ್ಳಿ ಗ್ರಾಮದ ವಾಸಿ ಶ್ರೀ ರಾಧಾಕೃಷ್ಣ (೪೫) ಬಿನ್ ವೆಂಕಟರಾಮ ಎಂಬುವರು ಮನೆಯಲ್ಲಿ ಇರುವಾಗ ಅದೇ ಗ್ರಾಮದ ವಾಸಿ ಶ್ರೀನಿವಾಸ, ಪಿ.ಎಂ.ನಾರಾಯಣಸ್ವಾಮಿ ಮತ್ತು ಇತರರು ಅಕ್ರಮ ಕೂಟ ಕಟ್ಟಿಕೊಂಡು ತಮ್ಮ ಮೇಲೆ ಪೊಲೀಸ್ ಠಾಣೆಯಲ್ಲಿ ಸುಳ್ಳು ದೂರು ನೀಡಿರುವುದಾಗಿ ರಾಧಾಕೃಷ್ಣ ರವರ ಮೇಲೆ ಜಗಳ ಕಾದು ಒಂದು ದೊಣ್ಣೆಯಿಂದ ರಾಧಾಕೃಷ್ಣ ರವರ ತಲೆಯ ಮೇಲೆ ಹೊಡೆದು ಕೊಲೆಗೆ ಮಾಡಲು ಪ್ರಯತ್ನಿಸಿರುತ್ತಾರೆ.
ದೊಂಬಿ: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ತಾಲೂಕು ಪೂಗಾನಹಳ್ಳಿ ಗ್ರಾಮದಲ್ಲಿ ಈ ಕೃತ್ಯ ಸಂಭವಿಸಿರುತ್ತದೆ. ದಿನಾಂಕ ೩೦-೦೫-೨೦೦೮ ರಂದು ೨೧೦೦ ಗಂಟೆ ಸಮಯದಲ್ಲಿ ಪೂಗಾನಹಳ್ಳಿ ಗ್ರಾಮದ ವಾಸಿ ಶ್ರೀ ಗೋಪಾಲ ಬಿನ್ ಮುನಿವೆಂಕಟಪ್ಪ ಎಂಬುವರು ತಮ್ಮ ಮನೆಯಲ್ಲಿರುವಾಗ ಅದೇ ಗ್ರಾಮದ ವಾಸಿಗಳಾದ ರಾಧಾಕೃಷ್ಣ, ಸುಧಾಕರ, ಜಯರಾಮಯ್ಯ, ರಘುಪತಿ ಮತ್ತು ಇತರರು ಅಕ್ರಮ ಕೂಟ ಕಟ್ಟಿಕೊಂಡು ಚುನಾವನೆ ವಿಷಯವಾಗಿ ಜಗಳ ಕಾದು ದೊಣ್ಣೆ ಮತ್ತು ಕೈಗಳಿಂದ ಹೊಡೆದು ರಕ್ತಗಾಯಪಡಿಸಿರುತ್ತಾರೆ.
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೨
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಕೆ.ಜಿ.ಎಫ್, ಸ್ವರ್ಣಕುಪ್ಪಂನಲ್ಲಿ ಈ ಕೃತ್ಯ ಸಂಭವಿಸಿರುತ್ತದೆ. ಸ್ವರ್ಣಕುಪ್ಪಂ ವಾಸಿ ಶ್ರೀಮತಿ ಪುಷ್ಪ ಕೋಂ ಅರುಣ್ ಕುಮಾರ್ ಎಂಬುವರಿಗೆ ಆಗಾಗ ಹೊಟ್ಟೆ ನೋವು ಬರುತ್ತಿದ್ದು, ಚಿಕಿತ್ಸೆ ಪಡೆದರು ವಾಸಿಯಾಗದೇ ದಿನಾಂಕ ೨೫-೦೫-೨೦೦೮ ರಂದು ರಾತ್ರಿ ಹೊಟ್ಟೆ ನೋವು ತಾಳಲಾರದೆ ತನ್ನ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಪ್ರಯತ್ನಿಸಿದಾಗ ಮೈಮೇಲೆ ಸುಟ್ಟಗಾಯಗಳಾಗಿ ಆಸ್ಪತ್ರೆಯಲ್ಲಿ ದಿನಾಂಕ ೩೦-೦೫-೨೦೦೮ ರಂದು ೧೮೫೫ ಗಂಟೆಗೆ ಮೃತ ಪಟ್ಟಿರುತ್ತಾರೆ.
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ತಾಲೂಕು ಮೂತನೂರು ಗ್ರಾಮದ ಬಳಿ ಈ ಕೃತ್ಯ ಸಂಭವಿಸಿರುತ್ತದೆ. ಮೂತನೂರು ಗ್ರಾಮದ ವಾಸಿ ಶ್ರೀ ಅಪ್ಪೋಜಪ್ಪ (೭೦) ಎಂಬುವರಿಗೆ ಈಗ್ಗೆ ಸುಮಾರು ೮ ತಿಂಗಳಿಂದ ಹೊಟ್ಟೆನೋವು ಬರುತ್ತಿದ್ದು, ಕೋಲಾರದ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡಿಸಿದ್ದು, ಹೊಟ್ಟೆನೋವು ವಾಸಿಯಾಗದ ಕಾರಣ ದಿನಾಂಕ ೨೮-೦೫-೨೦೦೮ ರಂದು ೦೯೦೦ ಗಂಟೆಗೆ ಅಪ್ಪೋಜಪ್ಪನು ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ವಾಪಸ್ಸು ಮನೆಗೆ ಬಂದಿರುವುದಿಲ್ಲ. ದಿನಾಂಕ: ೩೧-೦೫-೨೦೦೮ ರಂದು ೦೬೩೦ ಗಂಟೆಯಲ್ಲಿ ತನ್ನ ಜಮೀನಿನಲ್ಲಿರುವ ಬಾವಿಯಲ್ಲಿ ಅಪ್ಪೋಜಪ್ಪನ ಮೃತ್ ದೇಹವು ತೇಲುತ್ತಿದ್ದು, ಅಪ್ಪೋಜಪ್ಪನು ಹೊಟ್ಟೆನೋವು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


