June 30, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೩೦-೦೬-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ೦೧
-
ಬೆಮೆಲ್ ನಗರ ಪೊಲೀಸ್ ಠಾಣೆ ಮರಾಂತಿಕ ಅಪಘಾತಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.ಈ ಕೃತ್ಯವು ಬೆಮೆಲ್ ಕಾರ್ಖಾನೆಗೆ ಹೋಗುವ ರೈಲ್ವೆ ಕ್ರಾಸ್ ಬಳಿ ಸಂಭವಿಸಿರುತ್ತದೆ. ದಿನಾಂಕ: ೨೯-೦೬-೨೦೦೮ ರಂದು ರಾತ್ರಿ ಸುಮಾರು ೨೧೨೦ ಗಂಟೆ ಸಮಯದಲ್ಲಿ ಶ್ರೀ. ಅನಿಲ್ ಕುಮಾರ್ ಬಿನ್ ಕೃಷ್ಣ(೨೦) ೧ನೇ ಟೈಪ್, ಬೆಮೆಲ್ ನಗರ ವಾಸಿ ರವರು ತನ್ನ ವಾಹನ ಸಂಖ್ಯೆ ಕೆಎ-೦೮-ಕೆ-೩೭೦೮ಅನ್ನು ಬಂಗಾರಪೇಟೆ ಕಡೆಯಿಂದ ಕೆ.ಜಿ.ಎಫ್ ಕಡೆಗೆ ಚಲಾಯಿಸಿಕೊಂಡು ಬರುತ್ತಿರುವಾಗ ಎದರುಗಡೆಯಿಂದ ಬಸ್ಸ್ ಸಂಖ್ಯೆ ಕೆಎ-೦೮-೩೫೧೧ರ ಚಾಲಕ ರಾಂಗ್ ರಸ್ತೆಯಲ್ಲಿ ಡಿವೈಡರ್ ಕ್ರಾಸ್ ಜಾಗದಲ್ಲಿ ಅತಿವೇಗ ಮತ್ತು ಅಜಾಕರೂಕತೆಯಿಂದ ಚಲಾಯಿಸಿಕೊಂಡು ಬಂದು ಟಿ.ವಿ.ಎಸ್. ವಾಹನಕ್ಕೆ ಡಿಕ್ಕಿಹೊಡೆದು ೫೦ ಅಡಿ ದೂರಕ್ಕೆ ಎಳೆದುಕೊಂಡು ಹೋಗಿ ಮೋಟಾರು ಸೈಕಲ್ ಸವಾರನ ತಲೆ ಮೈ ಕೈ ತೀವ್ರ ಸ್ವರೂಪ ರಕ್ತಗಾಯಗಾಳಾಗಿ ಮೃತಪಟ್ಟಿರುತ್ತಾನೆ.
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಭಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೦-೦೬-೨೦೦೮ ರಂದು ೭೦೦ ಗಂಟೆ ಸಮಯದಲ್ಲಿ ಶ್ರೀ. ವಿ. ಲಕ್ಷ್ಮಯ್ಯ, ಪಿ.ಐ. ಡಿ.ಸಿ.ಐ.ಬಿ. ಡಿ.ಪಿ.ಓ. ಕೆ.ಜಿ.ಎಫ್ ರವರಿಗೆ ಬಂದ ಖಚಿತ ವರ್ತಮಾನದ ಮೇರೆಗೆ ಸಿಬ್ಬಂದಿಯೊಂದಿಗೆ ಬೆಳಿಗ್ಗೆ ೭.೦೦ ಗಂಟೆಯಿಂದ ೮.೦೦ ಗಂಟೆ ತನಕ ಲೂರ್ದನಗರದ ವಾಸಿ ಮಾರಿಯಾ ಕೋಂ ಮಲ್ಲಿಗಾ, ಲೂರ್ದನಗರ ರವರ ಮನೆಯ ಮೇಲೆ ದಾಳಿ ಮಾಡಲಾಗಿ ಅಕ್ರಮವಾಗಿ ೧೦ ಲೀಟರ್‍ನ ಎರಡು ಕ್ಯಾನುಗಳಲ್ಲಿ ಕಳ್ಳಭಟ್ಟಿ ಸಾರಾಯಿಯನ್ನು ಅಕ್ರಮವಾಗಿ ಮಾರಾಟ ಇಟ್ಟಿಕೊಂಡಿದ್ದನ್ನು ಅಮಾನತ್ತು ಪಡಿಸಿಕೊಂಡು ಕಾನೂನು ಕ್ರಮಕೈಗೊಂಡಿರುತ್ತದೆ. ಬೆಲೆ ಸುಮಾರು ರೂ. ೧೫೦೦/-ಗಳಾಗಿರುತ್ತೆ.
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
June 29, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೯-೦೬-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೬-೨೦೦೮ ರಂದು ೨೨೩೦ ಗಂಟೆ ಸಮಯದಲ್ಲಿ ಬಂಗಾರಪೇಟೆಯ ಹುಣಸನಹಳ್ಳಿ ಗ್ರಾಮದ ವಾಸಿ ಸುಮನ್‌ಗೌಡ (೧೨) ಬಿನ್ ಅಶ್ವತ್ತಪ್ಪ ಎಂಬುವನು ಕಂದಪ್ಪ ವೃತ್ತದ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಎದರುಗಡೆಯಿಂದ ೪೦೭ ಟೆಂಪೊ ಸಂಖ್ಯೆ ಕೆಎ-೦೭-೩೮೨೧ ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಸುಮನ್‌ಗೌಡನಿಗೆ ಡಿಕ್ಕಿ ಹೊಡೆದು, ತಲೆ ಮತ್ತು ಕೈಗಳ ಮೇಲೆ ರಕ್ತಗಾಯವಾಗಿರುತ್ತದೆ.
ಮೋಸ/ವಂಚನೆ ಪ್ರಕರಣಗಳು: ೦೧
ಕೊಲೆಗೆ ಪ್ರಯತ್ನ: ೦೧
ದೊಂಬಿ: ಇಲ್ಲ
ಹಲ್ಲೆ: ೦೧
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
June 28, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೮-೦೬-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೬-೨೦೦೮ ರಂದು ೦೮೦೦ ಗಂಟೆ ಸಮಯದಲ್ಲಿ ನಾಯನಹಳ್ಳಿ ಗ್ರಾಮದ ನಡುಬೀದಿಯಲ್ಲಿ ನಾಯನಹಳ್ಳಿ ವಾಸಿ ಶ್ರೀ ಅಬ್ದುಲ್ ಷಿರೋಜ್ ಬಿನ್ ರೆಹಮಾನ್ ತಮ್ಮ ಟಿವಿಎಸ್ ವಾಹನದಲ್ಲಿ ಹೋಗುತ್ತಿದ್ದಾ ಸ್ವಂತ ನಿವೇಶನದ ವಿಚಾರದಲ್ಲಿ ನಾಯನಹಳ್ಳಿ ಗ್ರಾಮದ ರಘುರಾಮರೆಡ್ಡಿ, ಶ್ರೀನಿವಾಸರೆಡ್ಡಿ ಮತ್ತು ಇತರೆ ೧೦ ಜನರು ಏಕಾಏಕಾ ಪಿರ್ಯಾದಿಯ ವಾಹನವನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ಬೈದು ಮಾರಕಾಯುದಗಳಿಂದ ಹೊಡೆದು ರಕ್ತಗಾಯಪಡಿಸಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.
ಹಲ್ಲೆ: ೦೧
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೬-೨೦೦೮ ರಂದು ೦೭೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ನಾಯನಹಳ್ಳಿ ಗ್ರಾಮದ ವಾಸಿ ಗೋವಿಂದಪ್ಪ, ರಘುರಾಮರೆಡ್ಡಿ ಮತ್ತು ಇತರರು ನಾಯನಹಳ್ಳಿ ಗ್ರಾಮದಲ್ಲಿರುವ ಶಾಳೆಯ ಮಕ್ಕಳ ಬಿಸಿ ಊಟದ ಅಡಿಗೆ ಮನೆ ಬಳಿ ಇಟ್ಟಿಗೆಗಳು ಎತ್ತಿ ಪಕ್ಕಕ್ಕೆ ಹಾಕುತ್ತಿದ್ದಾಗ ಅದೇ ಗ್ರಾಮದ ರಹಮಾನ್ ಸಾಬ್ ಮತ್ತು ಹುಸೇನ್ ಎಂಬುವರುಗಳು ದೊಣ್ಣೆ, ಮಚ್ಚುಗಳನ್ನು ಕೈಯಲ್ಲಿಡಿದುಕೊಂಡು ಬಂದು ಜಗಳ ಮಾಡಿ ಜಮೀನಿನಲ್ಲಿ ಇಟ್ಟಿಗೆಗಳನ್ನು ಹಾಕುತ್ತೀರ ಎಂದು ನಾನಾ ರೀತಿ ಜಾತಿ ಎತ್ತಿ ದುರ್ಬಾಷೆಗಳಿಂದ ಬೈದು ದೊಣ್ಣೆಯಿಂದ ಹೊಡೆದು ಗೋವಿಂದಪ್ಪನಿಗೆ ರಕ್ತಗಾಯಪಡಿಸಿ ಪ್ರಾಣ ಬೆದರಿಕೆ ಹಾಕಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೨
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಭಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೬-೨೦೦೮ ರಂದು ೧೨೩೦ ಗಂಟೆ ಸಮಯದಲ್ಲಿ ಶ್ರೀ. ಎನ್.ಎನ್.ಪ್ರಸಾದ್, ಪಿ.ಎಸ್.ಐ ರವರಿಗೆ ಜಕ್ಕರಸಕುಪ್ಪ ಗ್ರಾಮದಲ್ಲಿ ಯಾರೋ ಸಾರಾಯಿ ತಯಾರಿಸಿ ಮಾರಾಟ ಮಾಡುತ್ತಿದ್ದಾರೆಂಬ ಬಂದ ಖಚಿತ ಮಾಹಿತಿಯ ಮೇರೆಗೆ ತಮ್ಮ ಸಿಬ್ಬಂದಿಯೊಂದಿಗೆ ಜಕ್ಕರಸಕುಪ್ಪ ಗ್ರಾಮದ ಮರಿಕುಂಟ ಕಟ್ಟೆಯ ಬಳಿ ಕಾಯುತ್ತಿದ್ದಾಗ ಅದೇ ಗ್ರಾಮದ ವಾಸಿ ಪಳನಿ (೩೯) ಬಿನ್ ಚಲ್ಲಮುತ್ತು ಎಂಬುವನು ಒಂದು ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ೨ ಲೀಟರ್ ನ ೫ ಪ್ಲಾಸ್ಟಿಕ್ ಬಾಟಲ್‌ಗಳ ತುಂಬ ಕಳ್ಳಭಟ್ಟಿ ಸಾರಾಯಿಯನ್ನು ಕಾನೂನು ಬಾಹಿರವಾಗಿ ಇಟ್ಟುಕೊಂಡಿದವನ್ನು ಮತ್ತು ಮಾಲನ್ನು ಅಮಾನತ್ತುಗೊಳಿಸಿರುತ್ತಾರೆ.
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಭಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೮-೦೬-೨೦೦೮ ರಂದು ೦೯೧೫ ಗಂಟೆ ಸಮಯದಲ್ಲಿ ಶ್ರೀ.ಲ್ಕಕ್ಷ್ಮಯ್ಯ, ಪಿ.ಐ., ಡಿ.ಸಿ.ಐ.ಬಿ, ಡಿ.ಪಿ.ಓ, ಕೆ.ಜಿ.ಎಫ್. ಬಂದ ಖಚಿತ ಮಾಹಿತಿಯ ಮೇರೆಗೆ ತಮ್ಮ ಸಿಬ್ಬಂದಿಯೊಂದಿಗೆ ಸುಸೈಪಾಳ್ಯಂನಲ್ಲಿರುವ ತ್ರೇಸಮ್ಮ ರವರ ಮನೆಯ ಮೇಲೆ ದಾಳಿ ನಡೆಸಿದಾಗ ಮನೆಯೊಳಗೆ ಒಂದು ಪ್ಲಾಸ್ಟಿಕ್ ಬಕೇಟ್‌ನಲ್ಲಿ ೨೦೦೦/- ರೂ ಬೆಲೆ ಬಾಳುವಷ್ಟು ೨೦ ಲೀಟರ್ ಕಳ್ಳಭಟ್ಟಿ ಸಾರಾಯಿ ಸಿಕ್ಕಿದ್ದು ಮಾಲನ್ನು ಅಮಾನತ್ತುಗೊಳಿಸಿರುತ್ತಾರೆ.
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
June 27, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೭-೦೬-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೬-೨೦೦೮ ರಂದು ೧೧೦೦ ಗಂಟೆ ಸಮಯದಲ್ಲಿ ರಾಬರ್ಟ್‌ಸನ್‌ಪೇಟೆ, ಅಂಬೇಡ್ಕರ್ ನಗರ, ಮನೆ ಸಂಖ್ಯೆ ೭೮ರ ವಾಸಿ ಶ್ರೀ ನಾಗರಾಜ್ (೫೦) ಬಿನ್ ತಂಗರಾಜ್ ಎಂಬುವರು ತಮ್ಮ ಹಸುವನ್ನು ಡಾ/ ಅಂಬೇಡ್ಕರ್ ಪಾರ್ಕ್‌ನಲ್ಲಿ ಮೇಯಲ್ಲು ಬಿಟ್ಟಿದ್ದು ನಂತರ ೦೨೩೦ ಗಂಟೆಗೆ ಹೋಗಿ ನೋಡಲಾಗಿ ಯಾರೋ ಕಳ್ಳರು ಹಸುವನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆ. ಹಸುವಿನ ಬೆಲೆ ಸುಮಾರು ೧೦,೦೦೦/- ರೂಗಲಾಗುವುದು.
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೪-೦೬-೨೦೦೮ ರಂದು ೧೭೦೦ ಗಂಟೆ ಸಮಯದಲ್ಲಿ ಆಂದ್ರಪ್ರದೇಶದ ವಿ.ಕೋಟ ಮಂಡಲ್, ಮರಿಮಾಕನಪಲ್ಲಿ ಗ್ರಾಮದ ವಾಸಿ ಶ್ರೀ ಮಂಜುನಾಥರೆಡ್ಡಿ (೨೬) ಎಂಬುವರು ತಮ್ಮ ಲಗ್ಗೇಜ್ ಆಟೋ ಸಂಖ್ಯೆ ಎಪಿ-೦೩-ಎಕ್ಸ್-೧೪೮೨ ರ ವಾಹನದಲ್ಲಿ ಮುಳಬಾಗಿಲು ತಾಲೂಕು ಗಾಜುಲಹಳ್ಳಿ ಗ್ರಾಮದ ವಾಸಿ ವೆಂಕಟಸ್ವಾಮಿಯನ್ನು ಕುಳ್ಳರಿಸಿಕೋಂಡು ವಿಕೋಟೆಯಿಂದ ತಾಯಲೂರಿಗೆ ಬರುತ್ತಿರುವಾಗ ಕೊಡುಗೇನಹಳ್ಳಿ ಗ್ರಾಮದ ಬಳಿ ಹೋಗುತ್ತಿರುವಾಗ ಹಿಂದೆಯಿಂದ ಜಿಪಿಟಿ ಸಂಖ್ಯೆ ಎ-೫೭೮೬ ರ ವಾಹನದ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಆಟೋಗೆ ಡಿಕ್ಕಿ ಹೊಡೆದು ಆಟೋದಲ್ಲಿದ್ದ ಗಾಜುಲಹಳ್ಳಿ ಗ್ರಾಮದ ವೆಂಕಟಸ್ವಾಮಿಯವರ ತಲೆಗೆ ಏಟು ಬಿದ್ದು ರಕ್ತಗಾಯವಾಗಿರುತ್ತದೆ.
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಭಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೬-೨೦೦೮ ರಂದು ೦೮೦೦ ಗಂಟೆ ಸಮಯದಲ್ಲಿ ಶ್ರೀ. ಎನ್.ಎನ್.ಪ್ರಸಾದ್, ಪಿ.ಎಸ್.ಐ ರವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಮ್ಮ ಸಿಬ್ಬಂದಿಯೊಂದಿಗೆ ಸುಸೈಪಾಳ್ಯಂನಲ್ಲಿ ಕಳ್ಳಭಟ್ಟಿ ಸಾರಾಯಿ ಮಾರಾಟಕ್ಕಾಗಿ ಇಟ್ಟುಕೊಂಡಿದ್ದು, ಅಲ್ಲಿಗೆ ದಾಳಿ ಮಾಡಲಾಗಿ ಸುಸೈಪಾಳ್ಯಂನ ಮೇರಿ ಕೋಂ ಆಂತೋನಿ ಎಂಬುವರು ಸುಮಾರು ೮೦೦/- ರೂ ಬೆಲೆ ಬಾಳುವ ೮ ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು ಅಕ್ರಮವಾಗಿ ಮಾರಾಟಮಾಡುತ್ತಿದ್ದವರನ್ನು ಮತ್ತು ಮಾಲನ್ನು ಅಮಾನತ್ತುಗೊಳಿಸಿರುತ್ತಾರೆ.
ವ್ಯಕ್ತಿ ಕಾಣೆ ಪ್ರಕರಣಗಳು: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಬಗ್ಗೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ತಾಲೂಕು ಕಮ್ಮಸಂದ್ರ ಗ್ರಾಮದ ವಾಸಿ ಶ್ರೀ ಕೆ.ವೈ.ವೆಂಕಟರಮಣಪ್ಪ ಬಿನ್ ಯಳಚಪ್ಪ ಎಂಬುವರ ಮಗಳಾದ ವಿ.ಪವಿತ್ರ ಎಂಬುವಳು ಕೆ.ಜಿ.ಎಫ್. ಸುಭಾಷಿಣಿ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ವ್ಯಾಸಂಗ ಮಾಡುತ್ತಿದ್ದು, ದಿನಾಂಕ ೨೫-೦೬-೨೦೦೮ ರಂದು ೦೯೦೦ ಗಂಟೆಗೆ ಪರೀಕ್ಷೆಯ ಪ್ರವೇಶ ಪತ್ರ ತರುವುದಾಗಿ ಹೇಳಿ ಮನೆಯಿಂದ ಹೋದವಳು ಇದುವರೆವಿಗೂ ವಾಪಸ್ಸು ಬಾರದೆ ಕಾಣೆಯಾಗಿರುತ್ತಾಳೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
June 26, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೦೬-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆ ಸಹರದ್ದು ಕರಿಮಾನಹಳ್ಳಿಯಲ್ಲಿ ಅಂಗನವಾಡಿ ಕಾರ್ಯ ಕರ್ತೆಯಾಗಿ ಕೆಲಸ ನಿರ್ವಹಿಸುತ್ತಿದ್ದ ಶ್ರೀಮತಿ ಹೇಮಾವತಿ ರವರಿಗೆ ರೇಣುಕಾ ಸುಬೇದಾರ್ ಅಂಗವಾಡಿ ಇಲಾಖೆಯ ಮೇಲಾಧಿಕಾರಿಯಾಗಿದ್ದು, ಈಕೆ ದಿನಾಂಕ ೨೫-೦೬-೨೦೦೮ಕ್ಕೆ ೫ ವರ್ಷಗಳಿಂದ ಹೇಮಾವತಿ ರವರಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿ ಪರಿಷಿಷ್ಟ ವರ್ಗದ ಮಹಿಳೆ ಮೇಲೆ ದೌರ್ಜನ್ಯ ವೆಸಗಿ ರಜೆಯನ್ನು ಕೊಡದೆ ನಿನ್ನನ್ನು ವಜಾ ಮಾಡುವುದಾಗಿ ಬೆದರಿಕೆ ಹಾಕಿದ ಪ್ರಯುಕ್ತ ಹೇಮಾವತಿ ರವರು ಖಾಯಿಲೆ ಬಿದ್ದು ದಿನಾಂಕ: ೨೫-೦೬-೨೦೦೮ ರಂದು ಮೃತಪಟ್ಟಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
-
ರಾಬರ್ಟಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕಕರಣ ದಾಖಲಾಗಿರುತ್ತದೆ. ಈ ಕೃತ್ಯವು ರಾಬರ್ಟಸನ್ ಪೇಟೆ ಪಟೇಲ್ ಬೀದಿ, ಉರಿಗಾಂಪೇಟೆಯಲ್ಲಿ ಸಂಭವಿಸಿರುತ್ತದೆ. ಶ್ರೀ. ವಿಶ್ವನಾಥ್ ಬಿನ್ ಕುಪ್ಪಸ್ವಾಮಿ, ರಾಮಮೂರ್ತಿ, ಬೆಂಗಳರು ರವರ ಅಣ್ಣ ಶ್ರೀ ಪಳನಿ(೪೨) ರವರಿಗೆ ಸುಮಾರು ವರ್ಷಗಳಿಂದ ಆಗಾಗ ಹೊಟ್‌ಟೆ ನೋವು ಬರುತ್ತಿದ್ದು, ದಿನಾಂಕ: ೨೫-೦೬-೨೦೦೮ ರಂದು ರಾತ್ರಿ ಹೊಟ್ಟೆ ನೋವು ಜಾಸ್ತಿಯಾಗಿ ನೋವು ತಾಳಲಾರದೆ ದಿನಾಂಕ: ೨೬-೦೬-೨೦೦೮ ರಂದು ಬೆಳಿಗ್ಗೆ ೦೫೩೦೦ ಗಂಟೆಯಲ್ಲಿ ಮನೆಯ ತೆರಾಯಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
June 25, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೫-೦೬-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕಕರಣ ದಾಖಲಾಗಿರುತ್ತದೆ. ಈ ಕೃತ್ಯವು ರಾಮಸಾಗರ ಗ್ರಾಮದಲ್ಲಿ ಸಂಭವಿಸಿರುತ್ತದೆ. ಶ್ರೀ. ಗೋವಿಂದಪ್ಪ ಬಿನ್ ಹೊಸರಾಯಪ್ಪ, ಬಡಮಾಕನಹಳ್ಳಿ ಗ್ರಾಮದ ವಾಸಿಯ ಮಗಳಾದ ಶ್ರೀಮತಿ ಉಷಾ ಕೋಂ ಸಂತೋಷ ಎಂಬುವರಿಗೆ ಆಗಾಗ ಹೊಟ್ಟೆನೋವು ಬರುತ್ತಿದ್ದು, ದಿನಾಂಕ: ೨೪-೦೬-೨೦೦೮ ರಂದು ಹೊಟ್ಟೆ ನೋವು ತಾಳಲಾರದೆ ಸಂಜೆ ೧೭೩೦ ಗಂಟೆ ಸಮಯದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ತನ್ನ ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾಳೆ.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
June 24, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೦೬-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ೦೧
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
-
ಚಾಂಪಿಯನ್‌ರೀಫ್ಸ್ ಪೊಲೀಸ್ ಠಾಣೆಯಲ್ಲಿ ಅಭಕಾರಿ ಕಾಯ್ದೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩-೦೬-೨೦೦೮ ರಂದು ಶ್ರೀ ಎಂ.ರಾಜಶೇಖರ್, ಎ.ಎಸ್.ಐ, ಚಾಂಪಿಯನ್‌ರೀಫ್ಸ್ ಪೊಲೀಸ್ ಠಾಣೆ ರವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಮ್ಮ ಸಿಬ್ಬಂದಿಯೊಂದಿಗೆ ಚಾಂಪಯನ್‌ರೀಫ್ಸ್‌ನ ಆಂದ್ರಲೈನ್ ಬಳಿ ಮನೆ ಸಂಖ್ಯೆ ೧೬ ರಲ್ಲಿ ಮನೆ ಮಾಲಿಕ ಜಾನ್ ಬಿನ್ ದಿವ್ಯನಾಥನ್ ಎಂಬುವನು ಮನೆಯಲ್ಲಿ ಕಳ್ಳಭಟ್ಟಿ ಸಾರಾಯಿಯನ್ನು ಮಾರಾಟ ಮಾಡುತ್ತಿದ್ದವನನ್ನು ಹಿಡಿದುಕೊಂಡು ೫ ಲೀಟರ್ ಕಳ್ಳಭಟ್ಟಿ ಸಾರಾಯಿ, ಸ್ಟೀಲ್ ಕ್ಯಾನು ಮತ್ತು ಎರಡು ಗಾಜಿನ ಗ್ಲಾಸುಗಳನ್ನು ಅಮಾನತ್ತುಪಡಿಸಿಕೊಂಡಿರುತ್ತಾರೆ.
-
ಚಾಂಪಿಯನ್‌ರೀಫ್ಸ್ ಪೊಲೀಸ್ ಠಾಣೆಯಲ್ಲಿ ಅಭಕಾರಿ ಕಾಯ್ದೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೪-೦೬-೨೦೦೮ ರಂದು ಶ್ರೀ ವಿ. ಲಕ್ಷ್ಮಯ್ಯ ಪಿ.ಐ. ಡಿ.ಸಿ.ಐ.ಬಿ. ಡಿ.ಪಿ.ಓ. ಕೆ.ಜಿ.ಎಫ್ ರವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಮ್ಮ ಸಿಬ್ಬಂದಿಯೊಂದಿಗೆ ಚಾಂಪಯನ್‌ರೀಫ್ಸ್‌ನ ಮಳಿಯಾಲಿ ಲೈನ್ ಬಿ. ಬ್ಲಾಕ್ ನ ವಾಸಿ ಶ್ರೀಂತಿ ಪಾಪು ಕೋಂ ಲೇಟ್ ಮುರುಗನ್ ಎಂಬುವರು ತಮ್ಮ ಮನೆಯ ಮುಂದೆ ಒಂದು ಬಳಿಯ ಪ್ಲಾಸ್ಟಿಕ್ ಕ್ಯಾನ್ ನಲ್ಲಿ ೧೦ ಲೀಟರ್ ಸುಮಾರೂ ಸಾವಿರು ರೂಗಳ ಕಳ್ಳಭಟ್ಟಿ ಸಾರಾಯಿಯನ್ನು ಮಾರಾಟ ಮಾಡುತ್ತಿದ್ದವಳನ್ನು ಹಿಡಿದುಕೊಂಡು ಮತ್ತು ಮೇಲ್ಕಂಡ ಮಾಲನ್ನು ಅಮಾನತ್ತುಪಡಿಸಿಕೊಂಡಿರುತ್ತಾರೆ.
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
June 23, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೩-೦೬-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ೦೧
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೦೬-೨೦೦೮ ರಂದು ರಾತ್ರಿ ೧೮೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕಿನ ನಾಗನಹಳ್ಳಿ ಗ್ರಾಮದ ಬಳಿ ಇದೇ ಗ್ರಾಮದ ವಾಸಿ ಶ್ರೀಮತಿ ಪಾಪಮ್ಮ (೩೫) ಕೋಂ ನಾರಾಯಣಪ್ಪ ರವರು ದಾರಿಯಲ್ಲಿ ಹೋಗುತ್ತಿದ್ದಾಗ, ತಿಮ್ಮರಾಯಪ್ಪ ಬಿನ್ ಮುನಿಯಪ್ಪ, ಮುನಿಯಪ್ಪ, ಚಿಕ್ಕತಿಮ್ಮಪ್ಪ ಬಿನ್ ಕೆಂಚಪ್ಪ, ಪದ್ಮಮ್ಮ ಕೋಂ ಚಿಕ್ಕತಿಮ್ಮಪ್ಪ, ನಾಗನಹಳ್ಳಿ ಗ್ರಾಮದ ವಾಸಿಗಳು ಜಮೀನು ತಕರಾರುಗಳ ಹಿನ್ನಲೆಯಲ್ಲಿ ಶ್ರೀಮತಿ ಪಾಪಮ್ಮ ರವರನ್ನು ಕೆಟ್ಟ ಮಾತುಗಳಿಂದ ಬೈದು, ಅವರು ಧರಿಸಿದ್ದ ಸೀರೆಯನ್ನು ಎಳೆದು ಮಾನಭಂಗ ಮಾಡಿ, ಕೆಳಕ್ಕೆ ತಳ್ಳಿ ಕಾಲುಗಳಿಂದ ಒದ್ದು, ಕೈಗಳಿಂದ ಗುದ್ದಿ ಮೈನೋವುಂಟು ಮಾಡಿರುತ್ತಾರೆ.
ರಸ್ತೆ ಅಪಘಾತಗಳು: 01
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಬಂಗಾರಪೇಟೆ ತಾಲೂಕಿನ ಬೇತಮಂಗಲದಲ್ಲಿ ಕೆ.ಜಿ.ಎಫ್. ಮುಖ್ಯರಸ್ತೆಯಲ್ಲಿ ಬ್ಲೂಮೂನ್ ಎಂಟರ್‌ಪ್ರೈಸಸ್ ಅಂಗಡಿ ಮುಂಭಾಗ ಶ್ರೀ ನಾಗೇಂದ್ರ ಬಿನ್ ಗೋಪಾಲಪ್ಪ, ರಾಜೇಂದ್ರಹಳ್ಳಿ, ಮುಳಬಾಗಿಲು ತಾಲೂಕು ರವರು ಪಿ.ನಜೀರಿಯ ಬಸ್ ಸಂಖ್ಯೆ: ಕೆಎ-೦೭-೫೪೭೯ ವಾಹನಕ್ಕೆ ಗ್ರೀಸ್ ಹಾಕುತ್ತಿದ್ದಾಗ ಅದರ ಚಾಲಕ ಎಂ.ರಾಮಮೂರ್ತಿ ಎಂಬುವರು ಅಜಾಗರೂಕತೆಯಿಂದ ಚಲಾಯಿಸಿದ್ದರಿಂದ ಶ್ರೀ ನಾಗೇಂದ್ರ ಎಂಬುವರ ಎರಡೂ ಕೈಗಳ ಮೇಲೆ ಚಕ್ರ ಹರಿದು ಭಾರಿ ಘಾಯವಾಗಿರುತ್ತದೆ ಮತ್ತು ಕಿವಿಯಲ್ಲಿಯೂ ಸಹ ರಕ್ತ ಬಂದಿರುತ್ತದೆ.
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೦೬-೨೦೦೮ ರಂದು ೧೫೪೫ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ದೇಶಿಹಳ್ಳಿ ಗ್ರಾಮದಲ್ಲಿ ಪಸಲು ಗಂಗಮ್ಮ ದೇವಸ್ಥಾನದ ಹತ್ತಿರ ಇದೇ ಗ್ರಾಮದ ವಾಸಿಯಾದ ಶ್ರೀ ಜಿ.ಮುರಳಿ (೩೫) ಬಿನ್ ಗುರಪ್ಪ ಎಂಬುವರೊಂದಿಗೆ ಶ್ರೀನಿವಾಸ (೩೮) ಬಿನ್ ಗೋಪಾಲಪ್ಪ, ದೇಶಿಹಳ್ಳಿ ರವರು ವಿನಾಕಾರಣ ಜಗಳ ತೆಗೆದು ಒಂದು ಕಲ್ಲಿನಿಂದ ಹೊಡೆದು ಜಿ.ಮುರಳಿ ರವರ ಹಣೆ ಮತ್ತು ತುಟಿಯ ಮೇಲೆ ರಕ್ತಘಾಯಗಳನ್ನುಂಟು ಮಾಡಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೪-೦೬-೨೦೦೮ ರಂದು ೧೩೦೦ ಗಂಟೆಯಲ್ಲಿ ಬಂಗಾರಪೇಟೆ ಪಟ್ಟಣದಲ್ಲಿ ಕೆ.ಸಿ.ರೆಡ್ಡಿ ಕಾಲೇಜುನಲ್ಲಿ ಕು: ಪಿ.ವಿ.ಸುಧಾ ಬಿನ್ ವೆಂಕಟೇಶಪ್ಪ, ಬೋಡೇನಹಳ್ಳಿ ಮಜರಾ ಪುರಂ ಗ್ರಾಮ, ಬಂಗಾರಪೇಟೆ ತಾಲೂಕು ರವರು ಅಂತಿಮ ಬಿ.ಕಾಂ. ಪರೀಕ್ಷೆ ಬರೆದಿದ್ದು, ನಂತರ ಮನೆಗೆ ಬಾರದೆ ಕಾಣೆಯಾಗಿರುತ್ತಾಳೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೯-೦೬-೨೦೦೮ ರಂದು ರಾತ್ರಿ ೨೧೪೫ ಗಂಟೆ ಸಮಯದಲ್ಲಿ ಬಂಗಾರಪೇಟೆ ಪಟ್ಟಣದ ಗಂಗಮ್ಮನಪಾಳ್ಯದ ವಾಸಿ ಶ್ರೀ ಗೌತಮ್ (೩೫) ಬಿನ್ ಮುರುಗೇಶ್ ಎಂಬುವರು ತನ್ನ ಹೊಟ್ಟೆನೋವಿನಿಂದ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ಮನೆಯಲ್ಲಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿಹಚ್ಚಿಕೊಂಡಿದ್ದು, ಚಿಕಿತ್ಸೆಗಾಗಿ ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿದ್ದರೂ ಸಹ ಗುಣಮುಖನಾಗದೆ ದಿನಾಂಕ ೨೨-೦೬-೨೦೦೮ ರಂದು ಸಂಜೆ ೧೭೩೦ ಗಂಟೆಯಲ್ಲಿ ಮೃತಪಟ್ಟಿರುತ್ತಾನೆ.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf
June 22, 2008
ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೧-೦೬-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ರಾಬರ್ಟ್‌ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಸಾದಾರಣ ಅಪಘಾತಕ್ಕೆ ಸಂಬಂದಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕೆ.ಜಿ.ಎಫ್ ರಾಬರ್ಟ್ ಸನ್ ಪೇಟೆ ಪ್ರಿಚ್ಚರ್‍ಡ್ ರಸ್ತೆಯಲ್ಲಿ ಸಂಭವಿಸಿರುತ್ತದೆ. ದಿನಾಂಕ: ೨೨-೦೬-೨೦೦೮ ರಂದು ೧೩೧೦ ಗಂಟೆ ಸಮಯದಲ್ಲಿ ಶ್ರೀ ರಾಜಪ್ಪ ಮತ್ತು ಪತ್ನಿ ಅಮರಾವರಿ ಮತ್ತು ನಾರಾಯಣಸ್ವಾಮಿ ಎಂಬುವರು ಆಟೋ ಸಂಖ್ಯೆ ಎಂಇಬಿ-೪೮೧೩ರಲ್ಲಿ ಕೆ.ಜಿ.ಎಫ್ ನಿಂದ ಅಡಂಪಲ್ಲಿ ಗ್ರಾಮಕ್ಕೆ ಹೋಗುವಾಗ ಆಟೋ ಚಾಲಕ ಆಟೋವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಹೋಗಿ ಸ್ವರ್ಣಕುಪ್ಪಂ ತಿರುವಿನಲ್ಲಿ ಪಲ್ಟಿ ಹೊಡೆಸಿ ಆಟೋ ಕೆಳಕ್ಕೆ ಬಿದ್ದು, ರಾಜಪ್ಪ ಮತ್ತು ಪತ್ನಿಗೆ ರಕ್ತಗಾಯಗಳಾಗಿರುತ್ತವೆ. ಹಾಗೂ ನಾರಾಯಣಸ್ವಾಮಿರವರಿಗೆ ಕಾಲು ಮೂಳೆ ಮುರಿದಿರುತ್ತದೆ.
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೧
-
ಚಾಂಪಿಯನ್ ರೀಫ್ಸ್ ಪೊಲೀಸ್ ಠಾಣೆಯಲ್ಲಿ ದೊಂಬಿ ಪ್ರಕರಣಕ್ಕೆ ಸಂಬಂಧಸಿದಿಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ನಂಜಪ್ಪ ಗಾರ್ಡನ್, ೧ನೇ ಮುಖ್ಯ ರಸ್ತೆ ೧ನೇ ಕ್ರಾಸ್, ಬಾಬೂಸಾಬ್ ಪಾಳ್ಯ ಬೆಂಗಳೂರಿನಲ್ಲಿ ಸಂಭವಿಸಿರುತ್ತದೆ. ಶ್ರೀ. ವಿ. ರಮೇಶ್ ಬಿನ್ ವೆಂಕಟಾಚಲಂ(೩೩) ಬೈರಗಾನಹಳ್ಳಿ, ಬಂಗಾರಪೇಟೆ ತಾಲೂಕು ರವರು ದಿನಾಂಕ: ೨೧-೦೬-೨೦೦೮ ರಂದು ಬೆಳಿಗ್ಗೆ ೯-೩೦ ಗಂಟೆ ಸಮಯದಲ್ಲಿ ಬೆಂಗಳೂರಿನಲಿರುವ ತನ್ನ ಮನೆಯ ಬಳಿ ಇರುವಾಗ ಮುರಳಿ, ಅಮ್ಮಯ್ಯಮ್ಮ ರಾಜೇಂದ್ರ, ಮಾರಕ್ಕ, ರಾಜೇಶ್ ಮತ್ತು ವೆಂಕಟಸ್ವಾಮಿ ಎಲ್ಲರೂ ಬೈರಗಾನಹಳ್ಳಿ ವಾಸಿಗಳು ಹಾಲಿ ಮಹದೇವಪುರ ಬೆಂಗಳೂರು ರವರುಗಳು ಅಕ್ರಮ ಗುಂಪು ಕಟ್ಟಿಕೊಂಡು ಬಂದು ಹೆಂಡತಿಯನ್ನು ಬಿಟ್ಟು ಬೇರೆ ಮದುವೆ ಮಾಡಿಕೊಂಡಿರುವುದಾಗಿ ವಿನಾಕಾರಣ ಜಗಳ ಮಾಡಿ ಕೆಟ್ಟ ಮಾತುಗಳಿಂದ ಬೈದು, ಕೈಗಳಿಂದ ಹೊಡೆದು ಚಾಕುವಿನಿಂದ ಎಡಗೈ ಮೇಲೆ ರಕ್ತಗಾಯಪಡಿಸಿ, ಕೊಲೆ ಮಾಡುವುದಾಗಿ ಪ್ರಾಣ ಬೆದರಿಕೆಯಾಕಿರುತ್ತಾರೆ.
ಹಲ್ಲೆ: ೦೨
- ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೨-೦೬-೨೦೦೮ ರಂದು ೦೭೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ವರದಾಪುರ ಗ್ರಾಮದ ವಾಸಿ ಶ್ರೀಮತಿ ಕಲಾವತಿ ಕೋಂ ರಾಮಕೃಷ್ಣಪ್ಪ(೩೫) ಮತ್ತು ಅದೇ ಗ್ರಾಮದ ವಾಸಿಗಳಾದ ವೆಂಕಟಮುನಿಯಪ್ಪ, ಲಕ್ಷ್ಮ್ಮ ಮತ್ತು ಶಕುಂತಲಾ ರವರುಗಳು ಕೋಳಿಗಳ ವಿಚಾರದಲ್ಲಿ ಜಗಳ ಮಾಡಿಕೊಂಡು ಕೆಟ್ಟ ಮಾತುಗಳನ್ನು ಬೈದುಕೊಂಡು, ಕಲಾವತಿ ರವರ ಮಗಳು ಶೃತಿ ರವರು ಜಗಳ ಬಿಡಿಸಲು ಬಂದಾಗ ಶಕುಂತಲಾ ರವರು ಒಂದು ಕಲ್ಲಿನಿಂದ ಹಣೆಯ ಮೇಲೆ ಹೊಡೆದು ರಕ್ತಗಾಯ ಪಡಿಸಿರುತ್ತಾರೆ.
- ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲೂಕು ಹಿರೇಕರಪನಹಳ್ಳಿಯಲ್ಲಿ ಸಂಭವಿಸಿರುತ್ತದೆ. ಶ್ರೀ. ಚಂದ್ರಪ್ಪ ಬಿನ್ ಸೀನಪ್ಪ ಅದೇ ಗ್ರಾಮದ ವಾಸಿಗಳಾದ ಶ್ರೀನಿವಾಸಪ್ಪ ಬಿನ್ ವೆಂಕಟರಾಮಪ್ಪ, ಚಂದ್ರಪ್ಪ ಬಿನ್ ಶ್ರೀನಿವಾಸಪ್ಪ, ನಾಗೇಶಪ್ಪ ಮತ್ತು ಕನಕಮ್ಮ ರವರುಗಳು ಉದ್ದೇಶಪೂರ್ವಕವಾಗಿ ಜಮೀನು ತಕರಾರಿನ ವಿಷಯದಲ್ಲಿ ಚಂದ್ರಪ್ಪ ರವರೊಂದಿಗೆ ಜಗಳ ಕಾದು ಕೆಟ್ಟ ಮಾತುಗಳಿಂದ ಬೈದು ಕೈಗಳಿಂದ ಗಿಟ್ಟಿಯಾಗಿ ಹಿಡಿದುಕೊಂಡು ಹೊಡೆದು, ಪ್ರಾಣ ಬೆದರಿಕೆಯಾಕಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.
Leave a Comment » |
ಅಪರಾಧ |
Permalink
Posted by spkgf