ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೨-೦೭-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲಾ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಅಪಘಾತಕ್ಕೆ ಸಂಬಂಧಿಸಿದಂತೆ ಒಂದು ಪ್ರಕರಣ ದಾಖಲಾಗಿರುತ್ತದೆ ದಿನಾಂಕ ೨೧.೦೭.೨೦೦೮ ರಂದು ಸಂಜೆ ೭ ಗಂಟೆಯ ಸಮಯದಲ್ಲಿ ಬ್ಯಾಟರಾಯನಹಳ್ಳಿ ಗ್ರಾಮದ ವಾಸಿ ನಾರಾಯಣಪ್ಪ ತನ್ನ ಟಿವಿಎಸ್‌ಸಂಖ್ಯೆ ಸಿಎನ್‌ಕೆ ೪೦೧೩ ರ ವಾಹನದಲ್ಲಿ ಆದೇ ಗ್ರಾಮದ ಶಿವಪ್ಪನನ್ನು ಕುಳ್ಳರಿಸಿಕೊಂಡು ಬಲ್ಲ ಗ್ರಾಮದಿಂದ ಸ್ವಂತ ಕೆಲಸ ಮುಗಿಸಿಕೊಂಡು ಊರಿಗೆ ವಾಪಸ್ಸು ಬರಲು ಬೇತಮಂಗಲದ ಪಾಲರ್ ಸೇತುವೆ ಬಳಿ ರಸ್ತೆಯಲ್ಲಿ ಬರುತ್ತಿದ್ದಾಗ ಬೇತಮಂಗಲ ಕಡೆಯಿಂದ ಆಟೋ ಸಂಖ್ಯ ಸಿಎಡಬ್ಲೂ ೧೯೧೫ ರ ಚಾಲಕ ತನ್ನ ವಾಹವನ್ನು ಅತಿ ವೇಗ ಮತ್ತು ಅಜಾಗರುಕತೆಯಿಂದ ಬಂದು ನಾರಾಣಪ್ಪನವರ ವಾಹನಕ್ಕೆ ಡಿಕ್ಕಿ ಹಡೆದು ಇಬ್ಬರು ಕೆಳಕ್ಕೆ ಬಿದ್ದು ರಕ್ತ ಗಾಯಗಳಾಗಿರುತ್ತದೆ.
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೧-೦೭-೨೦೦೮ ರಂದು ಸಂಜೆ ಯಾರೋ ಒಬ್ಬ ಹೆಂಗಸು, ವಯಸ್ಸು ಸುಮಾರು ೭೦ ವರ್ಷವುಳ್ಳವಳು ಕಮ್ಮಸಂದ್ರ ಗ್ರಾಮದ ಸ್ಮಶಾನ ಬಳಿಯಿರುವ ಗೋಕುಂಟೆಯಲ್ಲಿ ಬಿದ್ದು ಮೃತಪಟ್ಟಿರುವುದಾಗಿ ಪ್ರಸಾದ್ ಎಂಬುವರು ದೂರು ನೀಡಿರುತ್ತಾರೆ.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ತಿಳಿದುಬಂದಿಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


