ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೦೯-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಕನ್ನ ಕಳವಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣದ ದಾಖಲಾಗಿರುತ್ತದೆ. ದಿನಾಂಕ ೨೪-೦೯-೨೦೦೮ ರಂದು ಬೆಳಿಗ್ಗೆ ಸುಮಾರು ೦೪೦೦ ಗಂಟೆಯಲ್ಲಿ ಯಾರೋ ದುಷ್ಕರ್ಮಿಗಳು ಬಂಗಾರಪೇಟೆ ತಾಲೂಕಿನ ಬಡಮಾಕನಹಳ್ಳಿ-ಜಯಮಂಗಲ ಕ್ರಾಸ್‌ನಲ್ಲಿರುವ ವಿಮಲ ಹೃದಯ ವಿದ್ಯಾಸಂಸ್ಥೆ ಕಛೇರಿಯ ಬಾಗಿಲಿನ್ನು ಹೊಡೆದು ಒಳಗೆ ಪ್ರವೇಶಿಸಿ ಒಂದು ಹೆಚ್.ಸಿ.ಎಲ್. ಕಂಪ್ಯೂಟರ್, ಎರಡು ಸಿ.ಪಿ.ಯು ಮತ್ತು ಒಂದು ಯು.ಪಿ.ಎಸ್. ಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೪-೦೯-೨೦೦೮ ರಂದು ಬೆಳಿಗ್ಗೆ ಸುಮಾರು ೦೯೩೦ ಗಂಟೆಯಲ್ಲಿ ಶ್ರೀ ಗೋವಿಂದಪ್ಪ ಬಿನ್ ಮುನಿಯಪ್ಪ, ವಯಸ್ಸು ೪೫ ವರ್ಷ, ವಾಸ: ದೆಬ್ಬನಹಳ್ಳಿ ಗ್ರಾಮ, ಬಂಗಾರಪೇಟೆ ತಾಲೂಕು ರವರ ಬಾಬತ್ತು ಜಮೀನಿನಲ್ಲಿ ಬೆಳೆದಿದ್ದ ನೀಲಗಿರಿ ಮರಗಳನ್ನು ಹುಣಸನಹಳ್ಳಿ ಗ್ರಾಮದ ನಂಜಪ್ಪ ಎಂಬುವರು ಕಟಾವು ಮಾಡುತ್ತಿದ್ದು, ಇದನ್ನು ಕೇಳಿದ ಶ್ರೀ ಗೋವಿಂದಪ್ಪನನ್ನು ನಂಜಪ್ಪ ರವರು ಒಂದು ದೊಣ್ಣೆಯಿಂದ ಹೊಡೆದು ರಕ್ತಗಾಯಪಡಿಸಿರುತ್ತಾನೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


