ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೮-೧೦-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ರಸ್ತೆಅಪಘಾಟಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲೂಕು ನಾಗಶೆಟ್ಟಿಹಳ್ಳಿ ಗ್ರಾಮದ ಬಳಿ ಸಂಭವಿಸಿರುತ್ತದೆ. ದಿನಾಂಕ ೧೩-೧೦-೨೦೦೮ ರಂದು ೧೯೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ವಿಜಯನಗರ ವಾಸಿ ಶ್ರೀ ನಾರಾಯಣಸ್ವಾಮಿ ಎಂಬುವರು ತನ್ನ ಹೊರೋ ಹೋಂಡಾ ದ್ವಿಚಕ್ರ ವಾಹನ ಸಂಖ್ಯೆ ಎಂ-೦೭-ಕೆ-೬೪೭೭ ರಲ್ಲಿ ಈರಪ್ಪ ಎಂಬುವರನ್ನು ಕುಳ್ಳರಿಸಿಕೊಂಡು ಬಲ್ಲ ಗ್ರಾಮದಿಂದ ಬಂಗಾರಪೇಟೆಗೆ ಬರಲು ನಾಗಶೆಟ್ಟಿಹಳ್ಳಿ ಗ್ರಾಮದ ಬಳಿ ಬರುತ್ತಿರುವಾಗ ಕೆ.ಜಿ.ಎಫ್ ಕಡೆಯಿಂದ ಒಂದು ಹೀರೋ ಹೋಂಡಾ ವಾಹನ ಚಾಲಕ ತನ್ನ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ನಾರಾಯಣಸ್ವಾಮಿರವರ ವಾಹನಕ್ಕೆ ಡಿಕ್ಕಿ ಹೊಡೆದ ಪ್ರಯುಕ್ತ ನಾರಾಯಣಸ್ವಾಮಿ ಮತ್ತು ಈರಪ್ಪರವರುಗಳಿಗೆ ರಕ್ತಗಾಯವಾಗಿರುತ್ತದೆ.
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ಟಿಪ್ಪುನಗರದಲ್ಲಿ ಸಂಭವಿಸಿರುತ್ತದೆ. ದಿನಾಂಕ ೧೭-೧೦-೨೦೦೮ ರಂದು ೨.೨೦ ಗಂಟೆ ಸಮಯದಲ್ಲಿ ಬಂಗಾರಪೇಟೆ, ಟಿಪ್ಪುನಗರ ವಾಸಿಗಳಾದ ಸದ್ದಾಂ ಮತ್ತು ಅಸೀಫ್ ಉಲ್ಲಾ ಎಂಬುವರುಗಳು ಹಳೆಯ ವೈಷಮ್ಯದ ಹಿನ್ನಲೆಯಲ್ಲಿ ಶ್ರೀ ಸೈಯದ್ ನದೀಂ ಪಾಷಾ ಬಿನ್ ಸೈಯದ್ ಷಫಿವುಲ್ಲಾ(೨೮) ಎಂಬುವರೊಂದಿಗೆ ಜಗಳ ಮಾಡಿ ಚಾಕುವಿನಿಂದ ನದೀಂ ಪಾಷಾ ರವರ ತಲೆಯ ಮೇಲೆ ಹೊಡೆದು ರಕ್ತಗಾಯಪಡಿಸಿರುತ್ತಾರೆ.
ಇತರೆ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಕ್ರಮ ಅಕ್ಕಿ ಮೂಟೆಗಳಿಗೆ ಸಂಬಂದಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೧೭-೧೦-೨೦೦೮ ರಂದು ೧೬೪೫ ಗಂಟೆ ಸಮಯದಲ್ಲಿ ಪಿ.ಎಸ್.ಐ ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆ ರವರಿಗೆ ಬಂದ ನಿಖರವಾದ ಮಾಹಿತಿ ಮೇರೆಗೆ ಸೂರಾಜ್ ಮಲ್ ವೃತ್ತದಲ್ಲಿ ಕೆ.ಜಿ.ಎಫ್ ಮಾರಿಕುಪ್ಪಂ ವಾಸಿ ಕರುಣಕರಣ್ (ಟೆಂಪೋಚಾಲಕ) ಚಲಾಯಿಸುತ್ತಿದ್ದ ಮಿನಿ ಟಿಂಪೋ ಸಂಖ್ಯೆ ಕೆಎ-೦೮-೩೧೭೨ ಅನ್ನು ನಿಲ್ಲಿಸಿ ಪರಿಶೀಲಿಸಿದಾಗ ಇದಾಯತುಲ್ಲಾ ಎಂಬುವರ ಅದೇಶದಂತೆ ರಾಬರ್ಟ್‌ಸನ್‌ಪೇಟೆ ಗೀತಾ ರಸ್ತೆಯಲ್ಲಿರುವ ಅವರ ಸೂಪರ್ ಬಜಾರ್ ಅಂಗಡಿಯಿಂದ ರೂ ೨೦,೦೦೦/- ಬೆಲೆ ಬಾಳುವ ೩೭ ಅಕ್ಕಿ ಮೂಟೆಗಳನ್ನು ಅಕ್ರಮವಾಗಿ ಯಾವುದೇ ದಾಖಲಾತಿಗಳಿಲ್ಲದೇ ಸಾಗಿಸುತ್ತಿದ್ದವರನ್ನು ದಸ್ತಿಗಿರಿಮಾಡಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


