ದಿನದ ಅಪರಾಧಗಳ ಪಕ್ಷಿನೋಟ ೨೦ನೇ ಅಕ್ಟೋಬರ್‍ ೨೦೦೮

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೦-೧೦-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ     

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ          

ವಾಹನ ಕಳ್ಳತನ: ಇಲ್ಲ 

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ        

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ   

-ಸಾಧಾರಣ: ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ     

ಹಲ್ಲೆ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕೆ.ಜಿ.ಎಫ್. ಪಾರಾಂಡಹಳ್ಳಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ ೧೯-೧೦-೨೦೦೮ ರಂದು ೧೯೩೦  ಗಂಟೆ ಸಮಯದಲ್ಲಿ ಕೆ.ಜಿ.ಎಫ್ ಪಾರಾಂಡಹಳ್ಳಿ ಗ್ರಾಮದ ವಾಸಿ ಶ್ರೀ ಕೃಷ್ಣಮೂರ್ತಿ (೨೬) ಎಂಬುವರು ತನ್ನ ಮನೆಗೆ ಬರುವಾಗ ಅದೇ ಗ್ರಾಮದ ಲಕ್ಷ್ಮಯ್ಯ ಬಿನ್ ಮುನಿಕೃಷ್ಣಪ್ಪ ಎಂಬುವರು ವಿನಾ ಕಾರಣ ಜಗಳ ಕಾದು ಒಂದು ಬೀರ್‍ ಬಾಟೆಲ್‌ನಿಂದ ಕೃಷ್ಣಮೂರ್ತಿ ರವರ ತಲೆಯ ಎಡ ಭಾಗಕ್ಕೆ ಹೊಡೆದು ರಕ್ತಗಾಯಪಡಿಸಿರುತ್ತಾರೆ.

ಇತರೆ: ಇಲ್ಲ            

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ 

ವ್ಯಕ್ತಿ ಕಾಣೆ ಪ್ರಕರಣಗಳು: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಹುಡಗಿ ಕಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೭-೦೯-೨೦೦೮ ರಂದು ೦೮೩೦ ಗಂಟೆ ಸಮಯಕ್ಕೆ ಕೆ.ಜಿ.ಎಫ್., ಕೋರಮಂಡಲ್ ತೆಲಗು ಲೈನ್ ವಾಸಿ ಶ್ರೀಮತಿ ನಾರಾಯಣಮ್ಮ ಕೋಂ ಲೇಟ್ ಸುಬ್ಬಯ್ಯ ಎಂಬುವರ ಮಗಳು ಕುಮಾರಿ ಜ್ಯೋತಿ (೩೩) ಎಂಬುವರು ಬಂಗಾರಪೇಟೆಯಲ್ಲಿರುವ ಗಾರ್ಮೆಂಟ್ಸ್‌ಗೆ ಕೆಲಸಕ್ಕೆ ಹೋದವಳು ಇದುವರೆವಿಗೂ ಮನೆಗೆ ವಾಪಸ್ಸು ಬಂದಿರುವುದಿಲ್ಲ.         ‌‌

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ

-ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply