ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೧೦-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ, ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಅಡಂಪಲ್ಲಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೨೩.೧೦.೨೦೦೮ ರಂದು ರಾತ್ರಿ ೭.೩೦ ಗಂಟೆ ಸಮಯದಲ್ಲಿ ಇದೇ ಗ್ರಾಮದ ವಾಸಿಗಳಾದ ಗಂಗಧರ ಬಿನ್ ವೆಂಕಟೇಶಪ್ಪ ರವರ ಕುರಿಗಳು ಸುಬ್ಬಗಾಡು ಎಂಬುವರ ಹೂ ಗಿಡಗಳನ್ನು ಮೇಯುತ್ತಿದ್ದ ವಿಷಯಕ್ಕೆ ಜಗಳ ಮಾಡಿಕೊಂಡು ಸುಬ್ರಮಣಿ, ಪ್ರಕಾಶ್ ರವರುಗಳು ಗಂಗಧರ ರವರನ್ನು ಹೊಡೆದು, ಒಂದು ಚಾಕುವಿನಿಂದ ಚುಚ್ಚಿ ರಕ್ತ ಗಾಯಪಡಿಸಿರುತ್ತಾರೆ.
ಇತರೆ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಕಳ್ಳಭಟ್ಟಿ ಸಾರಾಯಿ ಮಾರಾಟಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಸಂಖ್ಯೆ -೩೮, ೪ನೇ ಬ್ಲಾಕ್, ಸಂಜಯಗಾಂಧಿನಗರ, ರಾಬಟ್ðಸನ್‌ಪೇಟೆ, ಕೆ.ಜಿ.ಎಫ್. ದಿನಾಂಕ: ೨೪.೧೦.೨೦೦೮ ರಂದು ಬೆಳಿಗ್ಗೆ ೧೧.೩೦ ಗಂಟೆ ಸಮಯದಲ್ಲಿ ರಾಬರ್ಟ್‌ಸನ್‌ಪೇಟೆ ಪೊಲೀಸ್ ಸಿಬ್ಬಂದಿಗಳು ಹಗಲು ಗಸ್ತಿನಲ್ಲಿದ್ದಾಗ ನಾಸೀರ್ ಬಿನ್ ಅಬ್ದುಲ್ ಮಲೀಕ್(೩೮), ೪ನೇ ಬ್ಲಾಕ್ ಸಂಜಯಗಾಂಧಿ ನಗರ ವಾಸಿ ಒಂದು ಪ್ಲಾಸ್ಟಿಕ್ ಬಿಂದಿಗೆಯಲ್ಲಿ ೧೦ ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು ಇಟ್ಟುಕೊಂಡಿದ್ದನ್ನು ಅಮಾನತ್ತು ಪಡಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


