ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೯-೧೧-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೨
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಕನ್ನ ಕಳವು ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲೂಕಿನ ದಾಸೇಗೌಡನೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸಂಭವಿಸಿರುತ್ತದೆ. ದಿನಾಂಕ ೨೦-೦೯-೨೦೦೮ ರಂದು ಶನಿವಾರ ಬೆಳಗಿನ ಶಾಲೆ ಮುಗಿದ ಬಳಿಕ ಶಾಲೆಗೆ ಬೀಗವನ್ನು ಹಾಕಿಕೊಂಡು ಹೋಗಿದ್ದು, ದಿನಾಂಕ ೨೨-೦೯-೨೦೦೮ ರಂದು ಸೋಮವಾರ ಬೆಳಿಗ್ಗೆ ಶಾಲೆಗೆ ಬಂದು ನೋಡಲಾಗಿ ಯಾರೋ ಕಳ್ಳರು ಶಾಲೆಯ ಬೀಗವನ್ನು ಮುರಿದು ಶಾಲೆಯ ಮಕ್ಕಳಿಗೆ ಅಡಿಗೆ ಮಾಡುವ ೨ ದೊಡ್ಡ ಅಲ್ಯೂಮಿನಿಯಂ ಪಾತ್ರೆಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಅವುಗಳ ಬೆಲೆ ಸುಮಾರು ರೂ. ೩,೦೦೦/- ಗಳಾಗಿರುತ್ತದೆ.
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಕನ್ನ ಕಳವು ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆ ತಾಲೂಕಿನ ಎ.ಮೋತಕಪಲ್ಲಿ ಗ್ರಾಮದಲ್ಲಿ ನಡೆದಿರುತ್ತದೆ. ದಿನಾಂಕ ೧೮-೧೧-೨೦೦೮ ರಂದು ಬೆಳಿಗ್ಗೆ ೦೮೦೦ ಗಂಟೆಯಲ್ಲಿ ಶ್ರೀ ಗಂಗಲರೆಡ್ಡಿ ಬಿನ್ ಗಂಟ್ಲರೆಡ್ಡಿ ರವರು ತನ್ನ ಮನೆಯ ಬಾಗಿಲಿಗೆ ಬೀಗ ಹಾಕಿ, ಬೀಗದ ಕೈಯನ್ನು ಬಾಗಿಲ ಮೇಲೆ ಇಟ್ಟು ಹೋಗಿದ್ದು, ಮದ್ಯಾಹ್ನ ೧೩೦೦ ಗಂಟೆಗೆ ಇವರ ಮಗಳು ಬಂದು ನೋಡಲಾಗಿ ಯಾರೋ ಕಳ್ಳರು ಮನೆ ಬೀಗ ತೆಗೆದು ಮನೆಯೊಳಗೆ ಪ್ರವೇಶಿಸಿ ಮನೆಯ ಒಳಗಿದ್ದ ನಗದು ರೂ. ೮,೦೦೦/-, ೫ ಗ್ರಾಂ ಚಿನ್ನದ ಓಲೆಗಳು, ೪ ಗ್ರಾಂ ಚಿನ್ನದ ಜುಮಕಿ ಮತ್ತು ೭೦ ಗ್ರಾಂ ಕಾಲು ಚೈನು ಎಲ್ಲಾ ಒಟ್ಟು ಬೆಲೆ ರೂ. ೧೪,೭೦೦/- ಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ. ಮತ್ತು ಇವರ ಮನೆಯ ಪಕ್ಕದ ಮನೆಯಾದ ಮುರುಗೇಶ್ ಎಂಬುವರ ಮನೆಯಲ್ಲಿಯೂ ಸಹ ಕಳ್ಳರು ಮನೆ ಬೀಗ ಮುರಿದು ಮನೆಯೊಳಗೆ ಪ್ರವೇಶಿಸಿ ನಗದು ಹಣ ರೂ. ೫,೦೦೦/- ಮತ್ತು ಬಂಗಾರದ ಮೋಗುನತ್ತು ಒಂದು ಜೊತೆ, ಓಲೆಗಳು ೫ ಗ್ರಾಂ ಒಟ್ಟು ಬೆಲೆ ರೂ. ೮,೫೦೦/- ಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ
-ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


