ದಿನದ ಅಪರಾಧಗಳ ಪಕ್ಷಿನೋಟ ೧೭ನೇ ಡಿಸೆಂಬರ್‌ ೨೦೦೮

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೬-೧೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ      

ಸುಲಿಗೆ:  ಇಲ್ಲ    

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ:  ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ             

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ:  ಇಲ್ಲ

-ಸಾಧಾರಣ: ಇಲ್ಲ

-ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ಇಲ್ಲ

ಇತರೆ: ೦೧

  •           ರಾಬರ್ಟ್‌‌ಸನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ರಾಬರ್ಟ್‌‌ಸನ್‌ಪೇಟೆ ೨ನೇ ಎಂ.ಜಿ. ಮಾರ್ಕೆಟ್‌ನಲ್ಲಿ ಸಂಭವಿಸಿರುತ್ತದೆ. ದಿನಾಂಕ: ೧೫.೧೨.೨೦೦೮ ರಂದು ೫.೩೦ ಗಂಟೆ ಸಮಯದಲ್ಲಿ ನಗರ ಸಭೆ ಸಿಬ್ಬಂದಿ ಶ್ರೀ. ಚಂದ್ರಪ್ಪ ಎಂಬುವರು ಎಂ.ಜಿ. ಮಾರ್ಕೆಟ್‌ನಲ್ಲಿರುವ ಎಕ್ಬಾಲ್ ಎಂಬುವರ ಅಂಗಡಿಯ ಬಾಡಿಗೆ ವಸೂಲಿಗೆ ಹೋದಾಗ ಎಕ್ಬಾಲ್‌ ಮತ್ತು ಇತರರು ಸೇರಿ ಬೈದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದು ಮತ್ತು ದಿನಾಂಕ: ೧೬.೧೨.೨೦೦೮ ರಂದು ಶ್ರೀ. ಯರಪ್ಪ, ನಗರಸಭೆ ಪೌರಾಯಕ್ತರು, ನಗರ ಸಬೆ ರವರು ಸಿಬ್ಬಂದಿಯೊಂದಿಗೆ ಎಕ್ಬಾಲ್‌ ರವರ ಅಂಗಡಿಯ ಬಳಿ ಹೋಗಿ ಬಾಡಿಗೆ ಕೇಳಿದಾಗ ಅಸಬ್ಯವಾಗಿ ಬೈದು ಕರ್ತವ್ಯಕ್ಕೆ ಅಡ್ಡಿ ಪಡಿಸಿರುತ್ತಾರೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧

  •             ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಕಳ್ಳಭಟ್ಟಿ ಸಾರಾಯಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕುಂದರನಸಹಳ್ಳಿ ಗ್ರಾಮದ ಬಳಿ ಸಂಭವಿಸಿರುತ್ತದೆ. ದಿನಾಂಕ: ೧೭.೧೨.೨೦೦೮ ರಂದು ಬೆಳಿಗ್ಗೆ ೭.೦೦ ಗಂಟೆಯಲ್ಲಿ ಕಾಮಸಮುದ್ರಂ ಪೊಲೀಸ್‌ ಠಾಣೆ ಸಿಬ್ಬಂದಿಯವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಕುಂದರನಸಹಳ್ಳಿ ಗ್ರಾಮದ ಬಳಿ ಕಾಳಮ್ಮ ದೇವಸ್ಥಾನದ ಬಳಿ ದಾಳಿ ಮಾಡಲಾಗಿ ಗೋವಿಂದಪ್ಪ ಬಿನ್‌ ವೆಂಕಟಪ್ಪ(೨೨) ಕುಂದರನಸಹಳ್ಳಿ ಗ್ರಾಮದ ವಾಸಿ ರವರು ಒಂದು ಗೋಣಿ ಚೀಲದಲ್ಲಿ ೬೦ ಪಾಕೇಟು ಕಳ್ಳಭಟ್ಟಿ ಸಾರಾಯಿಯನ್ನು ಇಟ್ಟುಕೊಂಡಿದ್ದನ್ನು ವಶಕ್ಕೆ ತೆಗೆದುಕೊಂಡು ಕಾನೂನಿನ ಕ್ರಮಕೈಗೊಂಡಿರುತ್ತದೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ      

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ         

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply