ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೮-೧೨-೨೦೦೮ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಕೆ.ಜಿ.ಎಫ್.ನ ರಾಬರ್ಟ್‌ಸನ್‌ಪೇಟೆ ನಗರಸಭೆ ಕಛೇರಿ ಹಿಂಭಾಗ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಸಂಭವಿಸಿರುತ್ತದೆ. ದಿನಾಂಕ ೨೭-೧೨-೨೦೦೮ ರಂದು ಮದ್ಯಾಹ್ನ ಸುಮಾರು ೧೪೪೫ ರಿಂದ ೧೫೦೦ ಗಂಟೆಯ ಮದ್ಯೆದಲ್ಲಿ ಕು: ಸತ್ಯವಾಣಿ ಮುತ್ತು (೨೩) ಬಿನ್ ಪುಷ್ಪಲತ, ನಂ. ೧೬, ಹೌಸಿಂಗ್ ಬೋರ್ಡ್ ಕಾಲೋನಿ, ರಾಬರ್ಟ್‌ಸನ್‌ಪೇಟೆ, ಕೆ.ಜಿ.ಎಫ್. ರವರು ರಾಬರ್ಟ್‌ಸನ್‌ಪೇಟೆಯ ೨ನೇ ಬ್ಲಾಕ್ ಆಂಧ್ರಲೈನಿನ ವಾಸಿಯಾದ ಮಧು ಎಂಬುವರನ್ನು ಪ್ರೀತಿಸುತ್ತಿದ್ದು, ಅವನು ಇತ್ತೀಚಿಗೆ ಬೇರೆ ಯಾರನ್ನೋ ಪ್ರೀತಿಸುತ್ತಿರುವನೆಂದು ತಿಳಿದು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಮೇಲ್ಛಾವಣಿಯ ಕಬ್ಬಿಣದ ಕೊಂಡಿಗೆ ನೈಲಾನ್ ಹಗ್ಗ ಕಟ್ಟಿ ಕುತ್ತಿಗೆಗೆ ನೇಣು ಹಾಕಿಕೊಂಡು ಆತ್ನಹತ್ಯೆ ಮಾಡಿಕೊಂಡಿರುತ್ತಾಳೆ.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


