ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೫-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮೋಸ/ವಂಚನೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀ ರಘುಪತಿ, ಬಂಗಾರಪೇಟೆ ರವರು ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನ, ಬಂಗಾರು ತಿರುಪತಿ, ಗುಟ್ಟಹಳ್ಳಿ ಇಲ್ಲಿ ಡೇ ವಾಚ್‌ಮ್ಯಾನ್ ಕೆಲಸಕ್ಕೆಂದು ನೇಮಕವಾಗಿದ್ದು, ಆ ಸಮಯದಲ್ಲಿ ನಕಲಿ ೭ನೇ ತರಗತಿ ಅಂಕಪಟ್ಟಿ ಮತ್ತು ವರ್ಗಾವಣೆ ಪ್ರಮಾಣ ಪತ್ರಗಳನ್ನು ನೀಡಿ ಸರ್ಕಾರಕ್ಕೆ ಮೋಸಮಾಡಿರುತ್ತಾನೆ.
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹೆಂಗಸು ನಾಪತ್ತೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಶ್ರೀಮತಿ ಶೀಲಾ (೩೫) ಕೋಂ ರವಿಚಂದ್ರನ್, ಬಂಗಾರಪೇಟೆ ರವರು ದಿನಾಂಕ: ೧೩-೦೧-೨೦೦೯ ರಂದು ಮದ್ಯಾಹ್ನ ಸುಮಾರು ೧೪೦೦ ಗಂಟೆ ಸಮಯದಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ಮನೆಯಿಂದ ಹೋದವಳು ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುತ್ತಾರೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


