ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೬-೦೧-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೧-೨೦೦೯ ರಂದು ಬೆಳಿಗ್ಗೆ ೦೬೩೦ ಗಂಟೆಯಲ್ಲಿ ಕೆ.ಜಿ.ಎಫ್. ಉರಿಗಾಂ ಪೇಟೆ ವಾಸಿಯಾದ ಶ್ರೀ ವೆಂಕಟೇಶ್ ಬಿನ್ ಮುನಿಸ್ವಾಮಿ, ವಯಸ್ಸು ೫೦ ವರ್ಷ ರವರು ಪಾರಂಡಹಳ್ಳಿ ವೃತ್ತದಲ್ಲಿರುವ ಜಯರಾಮ್ ಹೋಟಲ್ ಬಳಿ ಕೂಲಿಯವರೊಂದಿಗೆ ಮಾತನಾಡುತ್ತಿದ್ದಾಗ ತನ್ನ ತಮ್ಮ ಶ್ರೀನಿವಾಸ ಎಂಬುವರು ಆಸ್ತಿ ವಿಚಾರರದಲ್ಲಿ ತನ್ನೊಂದಿಗೆ ಜಗಳ ತೆಗೆದು ದೊಣ್ಣೆಯಿಂದ ಹೊಡೆದು, ಕೆಟ್ಟ ಮಾತುಗಳಿಂದ ಬೈದು ಹಾಗೂ ಪ್ರಾಣ ಬೆದರಿಕೆ ಹಾಕಿರುತ್ತಾನೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಲಾಟರಿ ಮಾರಾಟ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೬-೦೧-೨೦೦೯ ರಂದು ಬೆಳಿಗ್ಗೆ ೧೧೦೦ ಗಂಟೆಗೆ ಬಾಬು ಬಿನ್ ಕೃಷ್ಣನ್, ವಿವೇಕನಗರ, ಕೆ.ಜಿ.ಎಫ್. ಎಂಬುವರು ಅರುಣಾಚಲ ಪ್ರದೇಶ್ ಮಂಡೇ ವೀಕ್ಲಿ ಲಾಟರಿಗಳನ್ನು, ಯಾವುದೇ ಪರವಾನಿಗೆ ಇಲ್ಲದೆ ಹಾಗೂ ಕರ್ನಾಟಕ ರಾಜ್ಯದಲ್ಲಿ ಲಾಟರಿ ನಿಷೇಧ ಜಾರಿಯಲ್ಲಿದ್ದರೂ ಸಹ ಅಕ್ರಮವಾಗಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರಿಂದ ರಾಬರ್ಟ್‌ಸನ್‌ಪೇಟೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲು ಮಾಡಲಾಗಿರುತ್ತದೆ.
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


