ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೫-೦೨-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ೦೧
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೪-೦೨-೨೦೦೯ ರಂದು ರಾತ್ರಿ ಸುಮಾರು ೧೯೦೦ ಗಂಟೆಯಲ್ಲಿ ಶ್ರೀರಾಮ ಬಿನ್ ಲೇಟ್ ಶಿವಾಜಿರಾವ್, ದೊಡ್ಡಪನ್ನಾಂಡ್ಲಹಳ್ಳಿ ರವರ ಅತ್ತೆ ರವರು ಮನೆಯಲ್ಲಿ ಇರುವಾಗ ಬಾಬು ರಾವ್ ಎಂಬುವರು ಸದರಿ ಹೆಂಗಸಿನೊಂದಿಗೆ ವಿನಾ ಕಾರಣ ಜಗಳ ತೆಗೆದು ಲೋಪರ್ ಮುಂಡೆ, ಸೂಳೆ ಮುಂಡೆ ಸಂಸಾರ ಸರಿಯಾಗಿ ಮಾಡುವುದಿಲ್ಲ ಎಂದು ಕೆಟ್ಟ ಮಾಡುಗಳಿಂದ ಬೈದು ಒಂದು ಕೋಲಿನಿಂದ ಆಕೆಯ ತಲೆಯ ಮೇಲೆ ಹೊಡೆದು ರಕ್ತಘಾಯಪಡಿಸಿರುತ್ತಾನೆ. ಈ ಕೃತ್ಯವು ದೊಡ್ಡಪನ್ನಾಂಡ್ಲಹಳ್ಳಿ ಗ್ರಾಮದಲ್ಲಿ ನಡೆದಿರುತ್ತದೆ.
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೧
-
ಬೆಮೆಲ್‌ನಗರ ಪೊಲೀಸ್ ಠಾಣೆಯಲ್ಲಿ ಸಾದಾರಣ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೪-೦೨-೨೦೦೯ ರಂದು ರಾತ್ರಿ ೨೦೧೫ ಗಂಟೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಸಂಖ್ಯೆ: ಕೆಎ-೦೧-ಎಫ್-೭೨೮೨ ಅನ್ನು ಅದರ ಚಾಲಕ ಕೆ.ಜಿ.ಎಫ್. ಕಡೆಯಿಂದ ಬಂಗಾರಪೇಟೆ ಕಡೆಗೆ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಬೆಮೆಲ್ ಕಾರ್ಖಾನೆಯ ಮುಖ್ಯ ಗೇಟ್ ಬಳಿ ಎದುರುಗಡೆಯಿಂದ ಬರುತ್ತಿದ್ದ ಮೋಟಾರ್ ಸೈಕಲ್ ಸಂಖ್ಯೆ: ಟಿಎನ್-೦೭-ಎಡಬ್ಲ್ಯೂ-೭೮೭೦ ವಾಹನಕ್ಕೆ ಡಿಕ್ಕಿ ಪಡಿಸಿದ್ದರಿಂದ ಸದರಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಬಾಬು ಅಲಿಯಾಸ್ ಸೌಂದರ್‌ರಾಜ್ ಬಿನ್ ಲೇಟ್ ಲಕ್ಷ್ಮೀನಾರಾಯಣ, ಸೌತ್ ಟ್ಯಾಂಕ್ ಬ್ಲಾಕ್, ಕೆ.ಜಿ.ಎಫ್. ಮತ್ತು ಏಳುಮಲೈ ಎಂಬುವರುಗಳಿಗೆ ರಕ್ತಗಾಯಗಳಾಗಿರುತ್ತವೆ.
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


