ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೭-೦೨-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೬-೦೨-೨೦೦೯ ರಂದು ಸಂಜೆ ೫.೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ಮಸ್ಕಂನ ಹೌಸಿಂಗ್ ಬೋಡ್ð ಕಾಲೋನಿಯ ವಾಸಿ ಶ್ರೀ ರವಿಕುಮಾರ್ ಬಿನ್ ಲೇಟ್ ರಾಜು ಎಂಬುವರು ಹೌಸಿಂಗ್ ಕಾಲೋನಿಯಲ್ಲಿರುವ ಸಂಪತ್ ಟೀ ಅಂಗಡಿ ಹತ್ತಿರ ಟೀ ಕುಡಿಯುತ್ತದ್ದಾಗ ಕೆ.ಜಿ.ಎಫ್ ಸುಸೈಪಾಳ್ಯಂ ವಾಸಿ ಸುರೇಶ್ ಎಂಬುವನು ಸಹ ಅಲ್ಲಿಗೆ ಟೀ ಕುಡಿಯಲು ಬಂದು ರವಿಕುಮಾರ್ ಕುರಿತು ನೀನು ಏನು ಎಂತ ಬನೀನು ಹಾಕಿಕೊಂಡಿದ್ದೀಯ ಎಂದು ಕೇಲಿದ್ದು, ಅದಕ್ಕೆ ರವಿಕುಮಾರ್ ನನಗೆ ವಯಸ್ಸಾಗಿದೆ ಎಂತ ಬನೀನು ಹಾಕಿಕೊಂಡರೆ ಏನು ಎಂದು ಹೇಳಿದಕ್ಕೆ ಸುರೇಶನು ನನಗೆ ಜವಾಬು ಹೇಳುತ್ತಿಯಾ ಎಂದು ಜಗಳಕಾದು ರವಿಕುಮಾರ್ ರವರನ್ನು ಕೆಟ್ಟಮಾತುಗಳಿಂದ ಬೈದು ಒಂದು ಸೋಡಾ ಬಾಟಲ್ ನಿಂದ ಹಣೆಯ ಮೇಲೆ ಹೊಡೆದು ರಕ್ತಗಾಯಪಡಿಸಿರುತ್ತಾನೆ.
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


