ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೧-೦೨-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಬಂಗಾರಪೇಟೆಯ ಬೂದಿಕೋಟೆ ಗ್ರಾಮದ ಶ್ರೀ. ವೆಂಕಟೇಶ್ವರ ವೈನ್ಸ್ ಬಳಿ ಸಂಭವಿಸಿರುತ್ತದೆ. ದಿನಾಂಕ: ೨೦.೦೨.೨೦೦೯ ರಂದು ರಾತ್ರಿ ೭.೦೦ ಗಂಟೆ ಸಮಯದಲ್ಲಿ ಕೋಟರಾಮಗೋಳದ ಶ್ರೀನಿವಾಸಪ್ಪ ರವರಿಗೆ ವೆಂಕಟೇಶ್ವರ ವೈನ್ಸ್ ಸಪ್ಲೇಯರ್ ಚಂದ್ರಪ್ಪರವರಿಗೂ ಜಗಳಗಳಾಗಿದ್ದರ ವಿಚಾರದಲ್ಲಿ ದಿನಾಂಕ: ೨೧.೦೨.೨೦೦೯ ರಂದು ಬೆಳಿಗ್ಗೆ ೧೦.೩೦ ಗಂಟೆಯಲ್ಲಿ ನಾಗರಾಜ, ಸೊಣ್ಣಪ್ಪ, ಬೈರಪ್ಪ, ಕೃಷ್ಣಮೂರ್ತಿ ಇನ್ನು ಇತರರು ಅಕ್ರಮಕೂಟ ಕಟ್ಟಿಕೊಂಡು ಕೈಗಳಲ್ಲಿ ಅಪಾಯಕರವಾದ ದೊಣ್ಣೆ ಮತ್ತು ಕಲ್ಲುಗಳನ್ನು ಹಿಡಿದುಕೊಂಡು ಬಂದು ವೈನ್ಸ್‌ನೊಳಗೆ ಪ್ರವೇಶ ಮಾಡಿ ಮುನಿವೆಂಕಟಪ್ಪನಿಗೆ ಹೊಡೆದು ಶಾಫ್‌ನಲ್ಲಿದ್ದ ಖಾಲಿ ಕೂಲ್ ಡ್ರಿಂಕ್ಸ್ ಬಾಟಲ್‌ಗಳನ್ನು ಹೊಡೆದು ನಾಶಪಡಿಸಿರುತ್ತಾರೆ.
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹುಡುಗಿ ನಾಪತ್ತೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಸಂಗನಹಳ್ಳಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ಇದೇ ಗ್ರಾಮದ ವಾಸಿ ಗಂಗಪ್ಪ (೬೫) ಬಿನ್ ಲೇಟ್ ಚಿನ್ನನ್ನ ಎಂಬುವರ ಮಗಳಾದ ಕುಮಾರಿ: ಶಕುಂತಲಾ(೧೮) ಎಂಬುವರು ಕೆ.ಜಿ.ಎಫ್‌ನ ರಾಬರ್ಟ್‌ಸನ್‌ಪೇಟೆ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ. ವ್ಯಾಸಂಗ ಮಾಡುತ್ತಿದ್ದು, ದಿನಾಂಕ: ೧೮.೦೨.೨೦೦೯ ರಂದು ಬೆಳಿಗ್ಗೆ ೯.೩೦ ಗಂಟೆ ಸಮಯದಲ್ಲಿ ಕಾಲೇಜಿಗೆ ಹೋದವಳು ಮನೆಗೆ ವಾಪಸ್ಸು ಬಾರದೆ ಕಾಣೆಯಾಗಿರುತ್ತಾಳೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


