ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೫-೦೨-೨೦೦೯ರ ೧೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ೦೨
-
ಬೆಮೆಲ್ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೪-೦೨-೨೦೦೯ ರಂದು ಬೆಳಿಗ್ಗೆ ೭.೦೦ ಗಂಟೆ ಸಮಯದಲ್ಲಿ ಬಂಗಾರಪೇಟೆಯ ಸೇಲಂ ನಗರದ ವಾಸಿ ವೆಂಕಟಾಚಲಪತಿ ಎಂಬುವರು ತನ್ನ ಮಗನಜೊತೆ ಕಮ್ಮಸಂದ್ರದಿಂದ ಬಂಗಾರಪೇಟೆಗೆ ತಮ್ಮ ಬಜಾಜ್ ವಾಹನ ಸಂಖ್ಯೆ ಕೆಎ-೦೪-ಜೆ-೧೧೧೨ ರಲ್ಲಿ ಹೋಗುತಿದ್ದು, ವೆಂಕಟಾಚಲಪತಿರವರು ತಮ್ಮ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಬೆಮೆಲ್ ನಗರದ ವಸಂತ ನಗರದ ಬಳಿ ವಾಹನ ಸಮೇತ ಕೆಳಕ್ಕೆ ಬಿದ್ದು ತಂದೆ ಮತ್ತು ಮಗನಿಗೆ ರಕ್ತಗಾಯವಾಗಿರುತ್ತದೆ.
-
ಬೆಮೆಲ್ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೪-೦೨-೨೦೦೯ ರಂದು ಸಂಜೆ ೪.೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಕೋರಮಂಡಲ್, ಓರಿಯಂಟಲ್ ಲೈನ್, ಮನೆ ಸಂಖ್ಯೆ ೮೫ರ ವಾಸಿ ವಿನೂತ್ ಕುಮಾರ್ (೧೭) ಎಂಬುವನು ಬೆಮೆಲ್ ಹೈ ಸ್ಕೂಲ್ ಕಡೆಯಿಂದ ಬೆಮೆಲ್ ಬಸ್ ನಿಲ್ದಾಣದ ಬಳಿ ತನ್ನ ಸೈಕಲ್ ನಲ್ಲಿ ಬರುತ್ತಿರುವಾಗ ಎದರುಗಡೆಯಿಂದ ಕೆ.ಎಸ್.ಆರ್.ಟಿ.ಸಿ ವಾಹನ ಸಂಖ್ಯೆ ಕೆಎ-೦೭-ಎಫ್-೮೧೯ ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ವಿನೂತ್‌ಗೆ ಡಿಕ್ಕಿ ಹೊಡೆದ ಪ್ರಯುಕ್ತ ವಿನೂತ್ ಕೆಳಗೆ ಬಿದ್ದು ಒಂದು ಕಾಲಿನ ಪಾದ ತೀವೃ ಗಾಯವಾಗಿರುತ್ತದೆ.
-ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ಇಲ್ಲ
ಇತರೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


