ದಿನದ ಅಪರಾಧಗಳ ಪಕ್ಷಿನೋಟ ೨೪ ನೇ ಮೇ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೦೫-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ 

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ  

-ರಸ್ತೆ ಅಪಘಾತಗಳು: ಇಲ್ಲ

-ಮಾರಣಾಂತಿಕ: ಇಲ್ಲ

  -ಸಾಧಾರಣ: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೩-೦೫-೨೦೦೯ ರಂದು ಮದ್ಯಾಹ್ನ ೨-೦೦ ಗಂಟೆ ಸಮಯದಲ್ಲಿ ಕುಮಾರಿ ಆಸ್ಮಾ ತಬಸೂಮ್ ಬಿನ್ ಮುಷೀರ್‍ ಅಹ್ಮದ್, ಇಂಚಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ತನ್ನ ಟಿ.ವಿ.ಎಸ್. ಸ್ಕೂಟಿ ಪೆಪ್ ಸಂಖ್ಯೆ ಕೆಎ-೦೮-ಜೆ-೯೫೮೭ ವಾಹನದಲ್ಲಿ ಕಾಲೇಜುಕಡೆಯಿಂದ ಮನೆಗೆ ಬರಲು ಸ್ವರ್ಣ ಭವನದ ಬಳಿ ಬರುತ್ತಿದ್ದಾಗ ಎದರುಗಡೆಯಿಂದ ರಾಘವೇಣದ್ರ ಎಂಬಾತನು ತನ್ನ ಟಿ.ವಿ.ಎಸ್. ಚಾಂಪ್ ಸಂಖ್ಯೆ ಕೆಎ-೦೮-ಇ-೪೬೫೧ ಅನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಸ್ಕೂಟಿ ಪೆಪ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಪೆಪ್ ಸವಾರಿಗೆ ಎಡ ಕಣ್ಣಿನ ಹುಬ್ಬಿನ ಬಳಿ ಹಾಗೂ ಎರಡು ಕೈಗಳ ಮೇಲೆ ರಕ್ತಗಾಯವಾಗಿರುತ್ತದೆ.   

 ಮೋಸ/ವಂಚನೆ ಪ್ರಕರಣಗಳು: ಇಲ್ಲ 

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ

ಹಲ್ಲೆ: ೦೧

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೩-೦೫-೨೦೦೯ ರಂದು ಬೆಳಿಗ್ಗೆ ೧೧-೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಗರುಡಕೆಂಪನಹಳ್ಳಿ ಗ್ರಾಮದ ವಾಸಿ ಶ್ರೀಮತಿ ಜಯಮ್ಮ ಎಂಬುವರ  ಮಗ ಬಾಲಾಜಿಯು ಕುರಿಕಾಯಲು ಹೋದಾಗ ಅದೇ ಗ್ರಾಮದ ವಾಸಿ ಮುನಿರಾಜು ಎಂಬಾತನು ಆ ಹುಡುಗನನ್ನು ಹೊಡೆದಿದ್ದು, ಈ ವಿಚಾರವಾಗಿ ಜಯಮ್ಮ ಯಾಕೆ ನನ್ನ ಮಗನನ್ನು ಹೊಡೆದಿದ್ದು ಎಂದು ಮುನಿರಾಜು ರವರನ್ನು ಕೇಳಿದ್ದಕ್ಕೆ ವಿನಾಕಾರಣ ಜಯಮ್ಮನೊಂದಿಗೆ ಜಗಳ ತೆಗೆದು ಹೊಡೆದು ರಕ್ತಗಾಯಪಡಿಸಿರುತ್ತಾರೆ.

 ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ      

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply