ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೫-೦೫-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಹಲ್ಲೆ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೪-೦೫-೨೦೦೯ ರಂದು ಮದ್ಯಾಹ್ನ ೧೬.೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಐತಾಂಡ್ಲಹಳ್ಳಿ ಗ್ರಾಮದ ವಾಸಿ ಶ್ರೀಮತಿ ಅನುಸೂಯಮ್ಮ ಕೋಂ ತಿಮ್ಮರಾಯಪ್ಪ ಎಂಬುವರ ಅದೇ ಗ್ರಾಮದ ವಾಸಿ ಮೈದುನಾದ ದೇವರಾಜ ಬಿನ್ ಅಬ್ಬಣ್ಣ ಎಂಬುವರು ಹಳೆಯ ವೈಶಮ್ಯದಿಂದ ಅನುಸೂಯಮ್ಮವರೊಂದಿಗೆ ಜಗಳ ಮಾಡಿ ಒಂದು ದೊಣ್ಣೆಯಿಂದ ತಲೆಯ ಮೇಲೆ ಹೊಡೆದು ರಕ್ತಗಾಯಪಡಿಸಿ, ಕೊಲೆ ಮಾಡುವುದಾಗಿ ಬೆದರಿಕೆಯಾಗಿರುತ್ತಾನೆ.
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾದ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯವು ಚನ್ನಪಲ್ಲಿ ಗ್ರಾಮದಲ್ಲಿ ಸಂಭವಿಸಿರುತ್ತದೆ. ದಿನಾಂಕ: ೨೪.೦೫.೨೦೦೯ ರಂದು ಬೆಳಿಗ್ಗೆ ೮.೦೦ ಗಂಟೆ ಸಮಯದಲ್ಲಿ ಶ್ರೀಮತಿ. ಅಮೃತಮ್ಮ ಕೋಂ ನಾರಾಯಣಪ್ಪ, ಚೆನ್ನಪಲ್ಲಿ ಗ್ರಾಮದವರ ಜಮೀನಿನಲ್ಲಿ ಅದೇ ಗ್ರಾಮದ ವಾಸಿ ರಮೇಶ್ ಎಂಬುವರು ಉಳಿಮೆ ಮಾಡುತ್ತಿದ್ದು, ಅದನ್ನು ಕೇಳಲಾಗಿ ಕೆಟ್ಟ ಮಾತುಗಳಿಂದ ಬೈದು ಒಂದು ಮಚ್ಚಿನಿಂದ ಬಲಗೈ ಮೇಲೆ ಹೊಡೆದು ರಕ್ತಗಾಯಪಡಿಸಿರುತ್ತಾನೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


