ದಿನದ ಅರಪಾಧಗಳ ಪಕ್ಷಿನೋಟ ೨೨ ನೇ ಜೂನ್ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೨-೦೬-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ        

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ           

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ೦೧

  •   ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೯-೦೬-೨೦೦೮ ರಿಂದ ೨೦-೦೬-೨೦೦೯ ರ ಮದ್ಯ ಬಂಗಾರಪೇಟೆ ಟೌನ್ ವಾಸಿ ಶ್ರೀಮತಿ ಕೆ.ಜಿ.ಸುಧಾ ಎಂಬುವರಿಗೆ ಪ್ರಭಾಕರ್‍ ಎಂಬುವರೊಂದಿಗೆ ೦೯-೦೬-೨೦೦೮ ರಂದು ಮದುವೆಯಾಗಿದ್ದು, ಮದುವೆಯ ಸಮಯದಲ್ಲಿ ವರದಕ್ಷಣೆ ನೀಡಿದ್ದರೂ ಸಹ ಹೆಚ್ಚಿನ ವರದಕ್ಷಣೆಯನ್ನು ತರಲು ಒತ್ತಾಯಿಸಿ ದೈಹಿಕ ಹಾಗೂ ಮಾನಸಿಕ ಕುರುಕುಳ ನೀಡುತ್ತಿದ್ದಾರೆ ಎಂದು ದೂರು ನೀಡಿರುತ್ತಾರೆ.  

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

 -ಸಾಧಾರಣ: ೦೧

  •   ಬೆಮೆಲ್ ನಗರ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೧-೦೬-೨೦೦೯ ರಂದು ೧೪-೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಬೇತಮಂಗಲ ವಾಸಿ ಶ್ರೀ. ಮಂಜುನಾಥ ಬಿನ್ ರಾಮಚಂದ್ರನ್ ಎಂಬುವರು ಬಂಗಾರಪೇಟೆಗೆಯಿಂದ ತನ್ನ ಊರಿಗೆ ಹಿರೋ ಹೊಂಡ ಫ್ಯಾಷನ್ ವಾಹನ ಸಂಖ್ಯೆ ಕೆಎ-೪೦-೮೭೩೮ ರಲ್ಲಿ ಬಂಗಾರಪೇಟೆ ಮೈನ್ ರೋಡ್ ಬೆಮೆಲ್ ಪೊಲೀಸ್ ಠಾಣೆ ಸರಹದ್ದು ವೈಲೀಡ್ ಇಂಜಿನಿಯರಿಂಗ್ ಬಳಿ ಬರುತ್ತಿರುವಾಗ ಎದರುಗಡೆಯಿಂದ ಬಸ್ ಸಂಖ್ಯೆ ಕೆಎ-೦೮-೩೬೯೦ ರ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮಂಜುನಾಥ ರವರ ವಾಹನಕ್ಕೆ ಡಿಕ್ಕಿ ಹೊಡೆದ ಪ್ರಯುಕ್ತ ಮಂಜುನಾಥ ರವರಿಗೆ ರಕ್ತಗಾಯವಾಗಿರುತ್ತದೆ.        

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ       

ಇತರೆ: ಇಲ್ಲ

ಹಲ್ಲೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

 ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ 

 ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply