ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೫-೦೭-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೨-೦೭-೨೦೦೯ ರಂದು ೧೮೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಬೇತಮಂಗಲ ಹೋಬಳಿ ಶ್ರೀನಿವಾಸಪುರ ಗ್ರಾಮದಲ್ಲಿ ಶ್ರೀಮತಿ. ಚಿನ್ನಮ್ಮ ಮತ್ತು ನಾಗರಾಜು ಎಂಬ ಎರಡು ಧಲಿತ ಸಂಘದ ಪಾರ್ಟಿಯವರುಗಳು ಗ್ರಾಮದಲ್ಲಿ ಲಕ್ಷ್ಮಿ ಎಂಬುವರು ಮಕ್ಕಳಿಗೆ ಸಿರಿಯಾಗಿ ಊಟ ಹಾಕುತ್ತಿಲ್ಲ ಎಂಬ ವಿಷಯವಾಗಿ ಜಗಳ ಮಾಡಿಕೊಂಡಿರುತ್ತಾರೆ ಇತ್ಯಾದಿ.
ಇತರೆ: ಇಲ್ಲ
ಹಲ್ಲೆ: ೦೨
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೩೦-೦೬-೨೦೦೯ ರಂದು ಕೆ.ಜಿ.ಎಫ್ ಪಾರಂಡ್ಲಹಳ್ಳಿಯ ವಾಸಿ ಶ್ರೀಮತಿ. ನಾರಾಯಣಮ್ಮ ಎಂಬುವರು ಮನೆಯಲ್ಲಿದ್ದಾಗ ಅದೇ ಕೇರಿಯ ನಟರಾಜ ಮತ್ತು ಇತರೆ ಇಬ್ಬರು ಸೇರಿಕೊಂಡು ನಾರಾಯಣಮ್ಮ ರವರ ಮನೆಯ ಕಿಟಕೀಗಳನ್ನು ಮುರಿದು ಕೆಟ್ಟ ಮಾತುಗಳಿಂದ ಬೈದು ಪ್ರಾಣ ಬೆದರಿಕೆ ಹಾಕಿರುತ್ತಾರೆ ಇತ್ಯಾದಿ.
-
ಉರಿಗಾಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೪-೦೫-೨೦೦೯ ರಿಂದ ೩೧-೦೫-೨೦೦೯ ರ ಮದ್ಯೆ ಕೆ.ಜಿ.ಎಫ್ ಕೆನಡಿಸ್ ಲೈನ್‌ನಲ್ಲಿರುವ ಚರ್ಜ ವಿಷಯವಾಗಿ ಬೆಮೆಲ್ ನಗರದ ವಾಸಿ ಶ್ರೀ. ಮೂರ್ತಿವೇಲು ಮತ್ತು ಆಲ್‌ವೀನ್ ಎಂಬುವರುಗಳು ಜಗಳ ವಾಡಿ ಕೆಟ್ಟಮಾತುಗಳಿಂದ ಬೈದಾಡಿಕೊಂಡು ಪ್ರಾಣ ಬೆದರಿಕೆ ಹಾಕಿಕೊಂಡಿರುತ್ತಾರೆ ಇತ್ಯಾದಿ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


