ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೮-೦೭-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹುಡುಗಿಯನ್ನು ಅಪಹರಣಕ್ಕೆ ಕುರಿತಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೦೭-೨೦೦೯ ರಂದು ಬೆಳಿಗ್ಗೆ ೦೫೩೦ ಗಂಟೆಯಲ್ಲಿ ಸದರಿ ಠಾಣೆಯ ಸರಹದ್ದಿನ ರಾಯಸಂದ್ರ ಗ್ರಾಮದಲ್ಲಿ ಕು: ಯಮುನ ಬಿನ್ ನಾರಾಯಣಪ್ಪ, ೮ನೇ ತರಗತಿ, ರಾಯಸಂದ್ರ ಗ್ರಾಮ ರವರು ತನ್ನ ಮನೆ ಮುಂದೆ ಸಾರಿಸಿ ರಂಗೋಲಿ ಹಾಕುತ್ತಿದ್ದವಳನ್ನು ಅದೇ ಗ್ರಾಮದ ವಾಸಿ ಸುಬ್ರಮಣಿ ಬಿನ್ ಅಪ್ಪೋಜಿ ಎಂಬುವರು ಅಪಹರಿಸಿಕೊಂಡು ಹೋಗಿರುತ್ತಾನೆ.
-ರಸ್ತೆ ಅಪಘಾತಗಳು: ೦೧
-ಮಾರಣಾಂತಿಕ: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೦೭-೨೦೦೯ ರಂದು ಮದ್ಯಾಹ್ನ ೧೫೩೦ ಗಂಟೆಯಲ್ಲಿ ಲಾರಿ ಚಾಲಕ ಕಾಳಿದಾಸ್ ಬಿನ್ ತಿರುಪತಿ ರವರು ಕುಪ್ಪಂನಿಂದ ಪಲಮನೇರಿಗೆ ಲೋಡ್ ಹಾಕಿಕೊಂಡು ಬರಲು ತಾನು ಲಾರಿಯನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಪಂತನಹಳ್ಳಿ ಗ್ರಾಮದ ಬಳಿ ಇರುವ ಕ್ರಾಸ್‌ನಲ್ಲಿ ಲಾರಿಯ ಚಾಲಕನ ಬಳಿ ಇದ್ದ ಡೋರ್ ಹೊರಗೆ ಬಂದಿದ್ದು ಆಯತಪ್ಪಿ ಚಾಲಕನು ಕೆಳಗೆ ಬಿದ್ದು ಮೃತಪಟ್ಟಿರುತ್ತಾನೆ.
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


