ದಿನದ ಅಪರಾಧಗಳ ಪಕ್ಷಿನೋಟ ೦೯ನೇ ಜುಲೈ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೯-೦೭-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ  

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ         

ಸಾಧಾರಣ ಕಳ್ಳತನ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಶ್ರೀಗಂಧ ಮರಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೭-೦೭-೨೦೦೯ ರಂದು ಕೆ.ಜಿ.ಎಫ್. ಜನರಲ್‌ ಆಸ್ಪತ್ರೆಯ ಆವರಣದಲ್ಲಿ ಬೆಳೆದಿದ್ದ ಶ್ರೀಗಂಧದ ಮರಗಳನ್ನು ಯಾರೋ ಕಳ್ಳರು ಕಳವು ಮಾಡಿರುತ್ತಾರೆ.

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

 -ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೮-೦೭-೨೦೦೯ ರಂದು ರಾತ್ರಿ ೧೯೦೦ ಗಂಟೆಯಲ್ಲಿ ಇನಾಸ್‌ರಾಜ್‌ ಎಂಬುವನು ತನ್ನ ಹೀರೊಹೊಂಡಾ ದ್ವಿಚಕ್ರ ವಾಹನ ಸಂಖ್ಯೆ: ಟಿಎನ್‌-೨೨-ವೈ-೫೧೪೩ ರಲ್ಲಿ ಕೆ.ಜಿ.ಎಫ್. ಕಡೆಯಿಂದ ಕ್ಯಾಸಂಬಳ್ಳ ಕಡೆಗೆ ಹೋಗುತ್ತಿದ್ದಾಗ, ಅಲ್ಲಿಕುಂಟೆ-ಕದಿರೇನಹಳ್ಳಿ ತಿರುವಿನ ಸಮೀಪ ಭವಾನಿ ಬಸ್‌ ಸಂಖ್ಯೆ: ಕೆಎ-೧೫-೧೨೧೫ ಅನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮೇಲ್ಕಂಡ ಮೋಟಾರ್‌ ಸೈಕಲ್‌ಗೆ ಡಿಕ್ಕಿ ಪಡಿಸಿದ್ದರಿಂದ ಮೋಟಾರ್‌ ಸೈಕಲ್‌ ಸವಾರ ಇನಾಸ್‌ರಾಜ್‌ ರವರಿಗೆ ತಲೆಗೆ ತೀವ್ರತರವಾದ ಗಾಯಗಳು ಆಗಿದ್ದು, ಚಿಕಿತ್ಸೆಗಾಗಿ ನಿಮ್ಹಾನ್ಸ್‌ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆದಲ್ಲಿ ಮೃತಪಟ್ಟಿರುತ್ತಾನೆ ಮತ್ತು ಬಸ್ಸಿನ ಚಾಲಕ ಬಸ್ಸನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿರುತ್ತಾನೆ.

 -ಸಾಧಾರಣ: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಸಾಧಾರಣ ಅಪಘಾತಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ: ೦೮-೦೭-೨೦೦೯ ರಂದು ೨೧೦೦ ಗಂಟೆಯಲ್ಲಿ ರವಿಚಂದ್ರನ್ ಎಂಬುವರು ತನ್ನ ಹೀರೋಹೊಂಡಾ ಮೋಟಾರ್‌ ಸೈಕಲ್‌ ಸಂಖ್ಯೆ: ಎಪಿ-೧೦-ಕ್ಯೂ-೬೦೭೯ ಅನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಸೈಯದ್‌ ವಾಸಿಂ ಅಕ್ರಂ ಬಿನ್ ಸೈಯದ್‌ ಅಬ್ದುಲ್‌ಖುದ್ದೂಸ್‌, ಪಾರಂಡಹಳ್ಳಿ, ಕೆ.ಜಿ.ಎಫ್. ರವರ ಆಟೋಗೆ ಡಿಕ್ಕಿ ಹೊಡೆದು ಆಟೋವಿನ ಮುಂಭಾಗ ಜಖಂಗೊಳಿಸಿರುತ್ತಾನೆ.

 ಮೋಸ/ವಂಚನೆ ಪ್ರಕರಣಗಳು: ಇಲ್ಲ    

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ  

ಇತರೆ: ಇಲ್ಲ

ಹಲ್ಲೆ: ೦೧

  •   ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ದಿನಾಂಕ ೦೮-೦೭-೨೦೦೯ ರಂದು ಬೆಳಿಗ್ಗೆ ೦೯೦೦ ಗಂಟೆಯಲ್ಲಿ ಶ್ರೀಮತಿ ಭಾಗ್ಯಮ್ಮ ಕೋಂ ತಾಯಪ್ಪ, ವಯಸ್ಸು ೩೫ ವರ್ಷ, ಗುಲ್ಲಹಳ್ಳಿ ಗ್ರಾಮ ರವರು ಗುಲ್ಲಹಳ್ಳಿ ಗ್ರಾಮದಲ್ಲಿ ಟೀ ಅಂಗಡಿ ಬಳಿ ಇದ್ದಾಗ ಅದೇ ಗ್ರಾಮದ ವಾಸಿಗಳಾದ ಗೋವಿಂದಪ್ಪ, ಕುಮಾರ, ಮಹೇಶ್‌ ಎಂಬುವರುಗಳು ಉದ್ದೇಶಪೂರ್ವಕವಾಗಿ ಶ್ರೀಮತಿ ಭಾಗ್ಯಮ್ಮ ರವರನ್ನು ಕೈಗಳ ಉಗಿರಿನಿಂದ ಪರಚಿದ್ದು, ಇದನ್ನು ಕಂಡ ಅವರ ಗಂಡ ತಾಯಪ್ಪ ಬಿಡಿಸಲು ಹೋದಾಗ ಕೆಳಕ್ಕೆ ತಳ್ಳಿ ಕಾಲುಗಳಿಂದ ಒದ್ದು, ಒಂದು ಕಲ್ಲಿನಿಂದ ಎದೆಯ ಮೇಲೆ ಹೊಡೆದು ನೋವುಂಟು ಮಾಡಿರುತ್ತಾರೆ.

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ           

ಮುಂಜಾಗ್ರತೆ ಕ್ರಮಗಳು: ಇಲ್ಲ 

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply