ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೦-೦೭-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೮-೦೭-೨೦೦೯ ರಂದು ರಾತ್ರಿ ಯಾರೋ ಕಳ್ಳರು ಆಂಡ್ರಸನ್‌ಪೇಟೆಯ ನೂರಿ ಶಾಲೆ ಷಹಜಾದ್ ರವರು ಹೊಸದಾಗಿ ಕಟ್ಟುವ ಮನೆಗಳ ಹತ್ತಿರ ಹಾಕಿದ್ದ ಹಳೆಯ ಮರದ ಡೋರ್‌ಗಳು ಮತ್ತು ಮರಗಳನ್ನು ಒಟ್ಟು ರೂ. ೧೦೦೦/- ಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಇತ್ಯಾದಿ.
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೯-೦೭-೨೦೦೯ ರಂದು ರಾತ್ರಿ ೭-೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಬೂಚೇಪಲ್ಲಿ ಗ್ರಾಮದ ವಾಸಿ ಶ್ರೀ. ಜಯರಾಮರೆಡ್ಡಿ ಎಂಬುವರು ತನ್ನ ಅಂಗಡಿಗೆ ಬೀಗ ಹಾಕಿಕೊಂಡು ಮನೆಗೆ ಬರುವಾಗ ದಾರಿಯಲ್ಲಿ ಅದೇ ಗ್ರಾಮದ ವಾಸಿಗಳಾದ ಚಂದ್ರಪ್ಪ ಮತ್ತು ಕೊತ್ತಮುನಿಯಪ್ಪ ಎಂಬುವರುಗಳು ಜಯರಾಮರೆಡ್ಡಿಯವರನ್ನು ಅಡ್ಡ ಕಟ್ಟಿ ಕೇಸಿನ ವಿಚಾರವಾಗಿ ಜಗಳ ತೆಗೆದು ಒಂದು ಇಟ್ಟಿಗೆ ಕಲ್ಲಿನಿಂದ ಹೊಡೆದು ರಕ್ತಗಾಯಪಡಿಸಿರುತ್ತಾರೆ ಇತ್ಯಾದಿ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


