ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೩-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ೦೧
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೦೧-೦೯-೨೦೦೯ ರಂದು ೧೭೦೦ ಗಂಟೆಯಲ್ಲಿ ಜಮೀನು ವಿಚಾರದಲ್ಲಿ ಚಲಪತಿ ಬಿನ್ ಲೇಟ್ ವೆಂಕಟಪ್ಪ ಎಂಬುವರು ಸೀನಪ್ಪ ಬಿನ್ ವೆಂಕಟಪ್ಪ, ಕಳ್ಳಿಕುಪ್ಪ ಗ್ರಾಮ ರವರೊಂದಿಗೆ ಜಗಳವಾಡಿ ಒಂದು ಮಚ್ಚಿನಿಂದ ಹೊಡೆದು ರಕ್ತಗಾಯಪಡಿಸಿರುತ್ತಾನೆ ಮತ್ತು ಪ್ರಾಣ ಬೆದರಿಕೆ ಹಾಕಿರುತ್ತಾನೆ. ಈ ಘಟನೆಯು ಕಳ್ಳಿಕುಪ್ಪ ಗ್ರಾಮದಲ್ಲಿ ನಡೆದಿರುತ್ತದೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: 01
-
ಉರಿಗಾಂ ಪೊಲೀಸ್ ಠಾಣೆಯಲ್ಲಿ ಹುಡುಗಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೩೧-೦೮-೨೦೦೯ ರಂದು ೧೧೦೦ ಗಂಟೆಯಲ್ಲಿ ಕು: ಮಾಲತಿ, ವಯಸ್ಸು ೨೩ ವರ್ಷ, ಎಂ.ಎಲ್.ಬ್ಲಾಕ್, ಉರಿಗಾಂ, ಕೆ.ಜಿ.ಎಫ್. ರವರು ಮನೆ ಬಿಟ್ಟು ಹೋದವಳು ಮತ್ತೆ ಮನೆಗೆ ವಾಪಸ್ಸಾಗದೆ ಕಾಣೆಯಾಗಿರುತ್ತಾಳೆ.
ಅಸ್ವಾಭಾವಿಕ ಮರಣದ ಪ್ರಕರಣಗಳು: ೦೧
-
ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣಕ್ಕೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೯-೦೮-೨೦೦೯ ರಿಂದ ೦೨-೦೯-೨೦೦೯ರ ಮಧ್ಯೆ ಮುನಿವೆಂಕಟಪ್ಪ, ವಯಸ್ಸು ೬೫ ವರ್ಷ, ಕರಡಗೂರು ಗ್ರಾಮ ರವರು ತನ್ನ ಜೀವನದಲ್ಲಿ ಜಿಗುಪ್ಸೆಗೊಂಡು ಒಂದು ಮರಕ್ಕೆ ಹಗ್ಗದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ. ಈ ಕೃತ್ಯವು ಕರಡಗೂರು ಗ್ರಾಮದಲ್ಲಿ ನಡೆದಿರುತ್ತದೆ.
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


