ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೦೯-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮನೆಗಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೦-೦೯-೨೦೦೯ ರಂದು ರಾತ್ರಿ ಯಾರೋ ಕಳ್ಳರು ಬಂಗಾರಪೇಟೆ ತಾಲೂಕು ವೇಣುಗೋಪಾಲಪುರ ಗ್ರಾಮದ ಸರ್ಕಾರಿ ಶಾಲೆಯ ಬೀಗ ಮುರಿದು ಶಾಲೆ ಒಳಗೆ ಇರುವ ಗ್ಯಾಸ್ ಸಿಲಿಂಡರ್ ಮತ್ತು ಅಡಿಗೆ ಪಾತ್ರೆಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಇತ್ಯಾದಿ.
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ೦೧
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೩-೦೯-೨೦೦೯ ರಂದು ೧೩೩೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಬೀಮಹಾನಹಳ್ಳಿ ಗ್ರಾಮದ ಉರ್ದು ಶಾಲೆ ಶಿಕ್ಷಕ ಶ್ರೀ. ಮಹಮ್ಮದ್ ಆಲಿ ಎಂಬುವರು ಹುಡಿಗಿಯನ್ನು ಚುಡಾಗಿಸಿದ ವಿಚಾರವಾಗಿ ಅದೇ ಗ್ರಾಮದ ಸೈಯದ್ ಮತ್ತು ಇತರೆ ೧೧ ಜನ ಅಕ್ರಮ ಕೂಟ ಕಟ್ಟಿಕೊಂಡು ಬಂದು ಶಿಕ್ಷಕನನ್ನು ಹೊಡೆದು ರಕ್ತಗಾಯಪಡಿಸಿರುತ್ತಾರೆ.
ಇತರೆ: ಇಲ್ಲ
ಹಲ್ಲೆ: ೦೧
-
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೫-೦೮-೨೦೦೯ ರಿಂದ ೨೩-೦೯-೨೦೦೯ ರವರೆಗೆ ಬಂಗಾರಪೇಟೆ ತಾಲೂಕು ಬೀಮಹಾನಹಳ್ಳಿ ಗ್ರಾಮದ ಉರ್ದು ಶಾಲೆ ಶಿಕ್ಷಕ ಶ್ರೀ. ಮಹಮ್ಮದ್ ಆಲಿ ಎಂಬುವರು ಅದೇ ಶಾಲೆಯ ವಿದ್ಯಾರ್ಥಿನಿಯ ಕೈಯನ್ನು ಹಿಡಿದು ಎಳೆದಾಡಿ ಮದುವೆ ಮಾಡಿಕೊ ಎಂದು ಪೀಡಿಸಿರುತ್ತಾನೆ ಇತ್ಯಾದಿ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


