ದಿನದ ಅಪರಾಧಗಳ ಪಕ್ಷಿನೋಟ ೦೩ ನೇ ಅಕ್ಟೋಬರ್‍ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೩-೧೦-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ

-ರಸ್ತೆ ಅಪಘಾತಗಳು: ೦೧

-ಮಾರಣಾಂತಿಕ: ಇಲ್ಲ

-ಸಾಧಾರಣ: ೦೧

  •   ಉರಿಗಾಂ ಪೊಲೀಸ್ ಠಾಣೆಯಲ್ಲಿ ಸಾಧಾರಣ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೨-೧೦-೨೦೦೯ ರಂದು ೦೮೪೫ ಗಂಟೆ ಸಮಯದಲ್ಲಿ ಕೆ.ಜಿ.ಎಫ್, ಸ್ಮಿತ್ ರಸ್ತೆಯಲ್ಲಿ ಡಿ.ಎ.ಆರ್‌ ನಲ್ಲಿ ಕರ್ತವ್ಯಕ್ಕೆ ಹೋಗಲು ಸಶಸ್ತ್ರ ಪೊಲೀಸ್ ಪೇದೆ ೧೨೪ ಶ್ರೀ. ರಾಮಪ್ಪ ಎಂಬುವರು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಯಾವುದೋ ಅಪರಿಚಿತ ದ್ವಿಚಕ್ರ ವಾಹನದ ಚಾಲಕ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಹಿಂದೆಯಿಂದ ಡಿಕ್ಕಿ ಹೊಡೆದು ಸ್ಥಳದಲ್ಲಿ ವಾಹನವನ್ನು ನಿಲ್ಲಿಸದೇ ಪರಾರಿಯಾಗಿದ್ದು, ರಾಮಪ್ಪ ರವರಿಗೆ ರಕ್ತಗಾಯವಾಗಿರುತ್ತದೆ ಇತ್ಯಾದಿ.

ಮೋಸ/ವಂಚನೆ ಪ್ರಕರಣಗಳು: ಇಲ್ಲ

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ೦೧

  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೊಂಬಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೧-೧೦-೨೦೦೯ ರಂದು ೧೦೩೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ಮುನಿಸಿಪಲ್ ಕಛೇರಿಯ ಬಳಿ ಜಾನ್ ಕೆನಡಿ ಮತ್ತು ಇತರೆ ೩೦ ಜನರು ಅಕ್ರಮ ಕೂಟ ಕಟ್ಟಿಕೊಂಡು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಮಾರಿಕುಪ್ಪಂ ವಾಸಿ ರಸೂದ್ ಖಾನ್ ರವರನ್ನು ದಾರಿಯಲ್ಲಿ ತಡೆದು ಕೆಟ್ಟ ಮಾತುಗಳಿಂದ ಬೈದು ಪ್ರಾಂ ಬೆದರಿಕೆ ಹಾಕಿರುತ್ತಾರೆ ಇತ್ಯಾದಿ.  

ಇತರೆ: ೦೧

  •   ಆಂಡಸ್ರನ್‌ಪೇಟೆ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಅಪಹರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೧-೧೦-೨೦೦೯ ರಂದು ಕೆ.ಜಿ.ಎಫ್, ಆಂಡ್ರಸನ್‌ಪೇಟೆಯ ಲೋಯರ್‍ ಮಸ್ಕಂನ ವಾಸಿ ಶ್ರೀ. ಸುಬ್ರಮಣಿ ಎಂಬುವರ ಮನೆಗೆ ೫ ರಿಂದ ೬ ಅಪರಿಚಿತ ವ್ಯಕ್ತಿಗಳು ಟಾಟ ಇಂಡಿಕಾ ಕಾರಿನ ಸಂಖ್ಯೆ ಕೆಎ-೦೩-ಬಿ-೬೦೪೯ ನಲ್ಲಿ ಬಂದು ನಾವು ಪೊಲೀಸರು ಎಂದು ಹೇಳಿ ಸುಬ್ರಮಣಿಯವರನ್ನು ಕರೆದುಕೊಂಡು ಹೋಗಿರುತ್ತಾರೆ ಇತ್ಯಾದಿ.

ಹಲ್ಲೆ: ಇಲ್ಲ

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

ಮುಂಜಾಗ್ರತೆ ಕ್ರಮಗಳು: ಇಲ್ಲ

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply