ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೧೪-೧೦-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ೦೧
-
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಾಧಾರಣ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೩-೧೦-೨೦೦೯ ರಂದು ಬೆಳಿಗ್ಗೆ ೧೦೩೦ ರಿಂದ ೧೦೪೦ ಗಂಟೆ ಸಮಯದಲ್ಲಿ ಕೆ.ಜಿ.ಎಫ್ ರಾಬರ್ಟ್‌ನಸ್‌ಪೇಟೆ ಪೊಲೀಸ್ ಠಾಣೆಯ ಪಿ.ಎಸ್.ಐ ರವರು ವಿವೇಕ ನಗರದಲ್ಲಿ ಗಸ್ತಿನಲ್ಲಿರುವಾಗ ಯಾರೋ ಕಳ್ಳರು ಕಳವು ಮಾಡುವ ಉದ್ದೇಶದಿಂದ ಒಂದು ಪಂಚಲೋಹ ಸ್ತ್ರಿ ವಿಗ್ರಹವನ್ನು ತೆಗೆದುಕೊಂಡು ಹೋಗುತ್ತಿರುವಾಗ ಅವರನ್ನು ತಡೆದು ವಿಚಾರಿಸಿ ಮುಂದಿನ ಕ್ರಮಕ್ಕಾಗಿ ಠಾಣೆಗೆ ಕರೆತಂದು ವಿಚಾರಣೆ ಮಾಡಿರುತ್ತಾರೆ ಇತ್ಯಾದಿ.
ವಾಹನ ಕಳ್ಳತನ: ೦೧
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ವಾಹನ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೧೧-೧೦-೨೦೦೯ ರಂದು ರಾತ್ರಿ ಬಂಗಾರಪೇಟೆ, ವಿವೇಕನಗರದ ವಾಸಿ ಸಯಬ್ ಎಂಬುವರು ತಮ್ಮ ಹೀರೋ ಹೊಂಡ ವಾಹನ ಸಂಖ್ಯೆ ಕೆಎ-೦೮-ಜೆ-೪೦೩೮ ಅನ್ನು ತಮ್ಮ ಮನೆಯ ಮುಂದೆ ನಿಲ್ಲಿಸಿದ್ದನ್ನು ಯಾರೋ ಅಪರಿಚಿರ ಕಳ್ಳರು ವಾಹನವನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ.
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಮಾರಣಾಂತಿಕ: ಇಲ್ಲ
-ಸಾಧಾರಣ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ಇಲ್ಲ
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


