ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೦೬-೧೧-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.
ಕೊಲೆ: ಇಲ್ಲ
ಡಕಾಯತಿ: ಇಲ್ಲ
ಸುಲಿಗೆ: ಇಲ್ಲ
ಮನೆಗಳ್ಳತನ: ಇಲ್ಲ
ಸಾಧಾರಣ ಕಳ್ಳತನ: ಇಲ್ಲ
ವಾಹನ ಕಳ್ಳತನ: ಇಲ್ಲ
ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ
-ರಸ್ತೆ ಅಪಘಾತಗಳು: ಇಲ್ಲ
-ಸಾಧಾರಣ : ಇಲ್ಲ
-ಮಾರಣಾಂತಿಕ: ಇಲ್ಲ
ಮೋಸ/ವಂಚನೆ ಪ್ರಕರಣಗಳು: ಇಲ್ಲ
ಕೊಲೆಗೆ ಪ್ರಯತ್ನ: ಇಲ್ಲ
ದೊಂಬಿ: ಇಲ್ಲ
ಇತರೆ: ಇಲ್ಲ
ಹಲ್ಲೆ: ೦೨
-
ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೪-೧೧-೨೦೦೯ ರಂದು ೦೬೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ತಾಲೂಕು ಎ ಮೋತಕಪಲ್ಲಿ ಗ್ರಾಮದ ವಾಸಿಗಳಾದ ಕೃಷ್ಣಮೂರ್ತಿ ಮತ್ತು ನಂಜಮ್ಮ ಎಂಬುವರುಗಳು ಅದೇ ಗ್ರಾಮದ ವಾಸಿ ಶ್ರೀಮತಿ ಶಾಂತಮ್ಮ ಕೋಂ ಶ್ರೀರಾಮಪ್ಪ ಎಂಬುವರೊಂದಿಗೆ ವಿನಾಕಾರಣ ಜಗಳ ತೆಗೆದು ಶಾಂತಮ್ಮನವರ ಮಗಳನ್ನು ಮತ್ತು ಮೊಮ್ಮಗನನ್ನು ಬೈದು ಒಂದು ದೊಣ್ಣೆಯಿದ ಹೊಡೆದು ರಕ್ತಗಾಯಪಡಿಸಿರುತ್ತಾರೆ.
-
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೦೫-೧೧-೨೦೦೯ ರಂದು ೧೦೦೦ ಗಂಟೆ ಸಮಯದಲ್ಲಿ ಬಂಗಾರಪೇಟೆ ಟೌನ್ ವಾಸಿಗಳಾದ ಚಂದ್ರ ಮತ್ತು ಸಂಜೀವ ಎಂಬುವರುಗಳು ಬಂಗಾರಪೇಟೆಯ ಅಮರಾವತಿನಗರದ ವಾಸಿ ಶ್ರೀ. ಮಲ್ಲಿಕಾರ್ಜುನಾ ಎಂಬುವರೊಂದಿಗೆ ವಿನಾಕಾರಣ ಜಗಳತೆಗೆದು ಕಲ್ಲಿನಿಂದ ಮಲ್ಲಿಕಾರ್ಜುನರವರ ತಲೆಗೆ ಹೊಡೆದು ರಕ್ತಗಾಯಪಡಿಸಿರುತ್ತಾರೆ.
ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ಇಲ್ಲ
ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ
ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ
ಮುಂಜಾಗ್ರತೆ ಕ್ರಮಗಳು: ಇಲ್ಲ
ಮೋಟಾರ್ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ
-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.


