ದಿನದ ಅಪರಾಧಗಳ ಪಕ್ಷಿನೋಟ ೨೪ನೇ ನವೆಂಬರ್‌ ೨೦೦೯

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ ೨೪-೧೧-೨೦೦೯ರ ೦೬೦೦ ಗಂಟೆಗೆ ಪೂರ್ವದ ೨೪ ಗಂಟೆಗಳ ಅವಧಿಯಲ್ಲಿ ಈ ಕೆಳಕಂಡ ಅಪರಾಧ ಪ್ರಕರಣಗಳು ದಾಖಲಾಗಿರುತ್ತವೆ.

ಕೊಲೆ: ಇಲ್ಲ

ಡಕಾಯತಿ: ಇಲ್ಲ

ಸುಲಿಗೆ: ಇಲ್ಲ

ಮನೆಗಳ್ಳತನ: ಇಲ್ಲ

ಸಾಧಾರಣ ಕಳ್ಳತನ: ಇಲ್ಲ    

ವಾಹನ ಕಳ್ಳತನ: ಇಲ್ಲ

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ: ಇಲ್ಲ 

-ರಸ್ತೆ ಅಪಘಾತಗಳು: ಇಲ್ಲ

-ಸಾಧಾರಣ : ಇಲ್ಲ    

-ಮಾರಣಾಂತಿಕ: ಇಲ್ಲ

ಮೋಸ/ವಂಚನೆ ಪ್ರಕರಣಗಳು: ಇಲ್ಲ 

ಕೊಲೆಗೆ ಪ್ರಯತ್ನ: ಇಲ್ಲ

ದೊಂಬಿ: ಇಲ್ಲ    

ಇತರೆ: ಇಲ್ಲ

ಹಲ್ಲೆ: ಇಲ್ಲ 

ವಿಶೇಷ ಹಾಗೂ ಸ್ಥಳೀಯ ಕಾಯ್ದೆ ಪ್ರಕರಣಗಳು: ೦೨

  •  ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ.  ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯ ಪಿ.ಎಸ್.ಐ. ಶ್ರೀ ಆರ್‍.ವೆಂಕಟೇಶ್ ರವರು ಖಚಿತ ವರ್ತಮಾನದ ಮೇರೆಗೆ ತನ್ನ ಸಿಬ್ಬಂದಿಯೊಂದಿಗೆ ಕೆ.ಜಿ.ಎಫ್.ನ ಸುಸೈಪಾಳ್ಯಂನಲ್ಲಿ ವಾಸವಾಗಿರುವ ಜಾನ್‌ಸನ್‌ ಬಿನ್ ಚಿನ್ನರಾಜ್‌ ಎಂಬುವರ ಮನೆಯಲ್ಲಿ ದಾಳಿ ಮಾಡಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಅಕ್ರಮ ಬಟ್ಟಿ ಸಾರಾಯಿ ಅಂದಾಜು ಬೆಲೆ ರೂ. ೩೫೦೦/- ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಲಾಗಿರುತ್ತದೆ.
  •   ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಗತ್ಯ ವಸ್ತುಗಳ ಕಾಯ್ದೆಗೆ ಸಂಬಂಧಿಸಿದಂತೆ ಅಪರಾಧ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ ೨೩.೧೧.೨೦೦೯ ರಂದು ೧೭೪೫ ಗಂಟೆಯಲ್ಲಿ ಶ್ರೀ ವಿ.ಎಲ್.ರಮೇಶ್‌, ಸಿ.ಪಿ.ಐ., ರಾಬರ್ಟ್‌‌ಸನ್‌ಪೇಟೆ ವೃತ್ತ, ಕೆ.ಜಿ.ಎಫ್. ರವರಿಗೆ ಬಂದ ಖಚಿತ ವರ್ತಮಾನದ ಮೇರೆಗೆ ತನ್ನ ಸಿಬ್ಬಂದಿಯೊಂದಿಗೆ ಕೆ.ಜಿ.ಎಫ್.ನ ಸ್ವರ್ಣನಗರದಲ್ಲಿ ದಾಳಿ ಮಾಡಿದಾಗ, ಸ್ವರ್ಣನಗರದ ವಾಸಿಗಳಾದ ನಾಗರಾಜ ಮತ್ತು ಮುರಳಿಧರ ಎಂಬುವರು ೧೪೨ ಪಡಿತರ ಅಕ್ಕಿ ಮೂಟೆಗಳನ್ನು ದಾಸ್ತಾನು ಮಾಡಿರುವುದನ್ನು ಕಂಡು ಅವುಗಳನ್ನು ತಮ್ಮ ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಲಾಗಿರುತ್ತದೆ.

ವ್ಯಕ್ತಿ ಕಾಣೆ ಪ್ರಕರಣಗಳು: ಇಲ್ಲ

 ಅಸ್ವಾಭಾವಿಕ ಮರಣದ ಪ್ರಕರಣಗಳು: ಇಲ್ಲ

 ಮುಂಜಾಗ್ರತೆ ಕ್ರಮಗಳು: ೦೧

  •   ಆಂಡ್ರಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೈಗೊಂಡ ಬಗ್ಗೆ ಒಂದು ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: ೨೨-೧೧-೨೦೦೯ ರಂದು ರಾತ್ರಿ ಬಿನೋ ಬಿನ್ ಅಂತೋಣಿದಾಸ್‌ ಮತ್ತು ಇತರೆ ೮ ಜನರು, ದಿನಾಂಕ: ೨೫-೧೧-೨೦೦೯ ರಂದು ಕೆ.ಜಿ.ಎಫ್.ನ ನಗರಸಭೆ ಅಧ್ಯಕ್ಷರ ಅವಿಶ್ವಾಸ ನಿರ್ಣಯ ಇರುವ ಸಂಬಂಧ ಸಾರ್ವಜನಿಕರಿಗೆ ತೊಂದರೆ ಕೊಟ್ಟು, ಶಾಂತಿಯನ್ನು ಕದಡುವ ಸಂಭವಗಳು ಇದ್ದುದ್ದರಿಂದ ಮುಂಜಾಗ್ರತಾ ಕ್ರಮವಾಗಿ ಅಂತೋಣಿದಾಸ್‌ ಮತ್ತು ಇತರೆ ೮ ಜನರನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಲು ಮಾಡಲಾಗಿರುತ್ತದೆ.

ಮೋಟಾರ್‍ ವಾಹನ ಕಾಯ್ದೆ ಅಡಿ ದಾಖಲಾದ -ಪ್ರಕರಣಗಳು: ಇಲ್ಲ

-ಸ್ಥಳ ದಂಡ ಮೊತ್ತ: ತಿಳಿದುಬಂದಿಲ್ಲ

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ನಿಸ್ತಂತು ಕೇಂದ್ರವನ್ನು ದೂರವಾಣಿ ಸಂಖ್ಯೆ ೦೮೧೫೩-೨೭೪೭೪೩ ರಲ್ಲಿ ಸಂಪರ್ಕಿಸಬಹುದಾಗಿರುತ್ತದೆ.

Leave a Reply